ನಾನು ಬಿಜೆಪಿ ಬಿಡಲ್ಲ

i will not Quit BJP says suresh babu

06-02-2018

ಬಳ್ಳಾರಿ: ನಾನು ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ನನ್ನ ರಾಜಕೀಯ ಬೆಳವಣಿಗೆ ಆರಂಭವಾಗಿದ್ದೇ ಶ್ರೀರಾಮುಲು ಅವರಿಂದ, ನನ್ನ ಕೊನೆಯ ಉಸಿರು ಇರುವವರೆಗೂ ಬಿಜೆಪಿಯಲ್ಲೇ ಇರುತ್ತೇನೆ ಎಂದು, ಕಂಪ್ಲಿ ಕ್ಷೇತ್ರದ ಶಾಸಕ ಸುರೇಶ್ ಬಾಬು ಹೇಳಿದ್ದಾರೆ.
ಬಳ್ಳಾರಿಯಲ್ಲಿ ಮಾತನಾಡಿದ ಅವರು, ‘ಸುರೇಶ್ ಬಾಬು ಕಾಂಗ್ರೆಸ್ ಸೇರುತ್ತಾರೆ ಎಂದು ಅಲ್ಲಲ್ಲಿ ಕೇಳಿ ಬರುತ್ತಿರುವ ವದಂತಿಗಳು ಸತ್ಯಕ್ಕೆ ದೂರವಾಗಿವೆ, ನಾನು ಕಾಂಗ್ರೆಸ್ ಪಕ್ಷ ಸೇರುತ್ತಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ‘ಶ್ರೀರಾಮುಲು ಹಾಗೂ ಜನಾರ್ದನ ರೆಡ್ಡಿ ನನ್ನ ಎರಡು ಕಣ್ಣುಗಳಿದ್ದಂತೆ, ಸ್ವಾಮಿ ನಿಷ್ಠೆಹೊಂದಿರುವ ನಾನು ದ್ರೋಹ ಮಾಡುವುದಿಲ್ಲ’ ಎಂದು ಹೇಳಿದ್ದಾರೆ.
‘ಸಚಿವ ಡಿ.ಕೆ.ಶಿವಕುಮಾರ್ ಗೆ ಭಯ ಶುರುವಾಗಿದೆ, ಅವರ ಮನೆ ಮೇಲೆ ಐಟಿ ದಾಳಿ ನಂತರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ’ ಎಂದು ಕುಟುಕಿದ್ದಾರೆ. ಕಾಂಗ್ರೆಸ್ ನವರು ಚಿಲ್ಲರೆ ರಾಜಕಾರಣ ನಿಲ್ಲಿಸಬೇಕು, ಸುರೇಶ್ ಬಾಬು ಯಾರ ಮನೆಯ ಬಾಗಿಲನ್ನೂ ತಟ್ಟಿಲ್ಲ, ನಮ್ಮ ಮನೆ ಬಾಗಿಲು ಗಟ್ಟಿಯಾಗಿದೆ ಎಂದು ತಿರುಗೇಟು ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


Bjp yavar amount modi hattara ede adakke e tara matadatira
  • Shivamurti
  • Labour