ಮೋದಿ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ

youth congress protest against modi in bengaluru

06-02-2018

ಬೆಂಗಳೂರು: ರಾಜ್ಯ ಸರ್ಕಾರ 10% ಕಮೀಷನ್ ತೆಗೆದು ಕೊಳ್ಳುತ್ತದೆ ಎಂಬ ಮೋದಿ ಹೇಳಿಕೆ ಖಂಡಿಸಿ, ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಮೌರ್ಯ ಸರ್ಕಲ್ನಲ್ಲಿ ಬಿಜೆಪಿಯವರ ಮುಖವಾಡ ತೊಟ್ಟು ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ. ಪ್ರಧಾನಿ‌ ಮೋದಿ, ಕೇಂದ್ರ ಸಚಿವ ಸದಾನಂದ ಗೌಡ, ಜಗದೀಶ್ ಶೆಟ್ಟರ್, ಬಿ.ಎಸ್.ಯಡಿಯೂರಪ್ಪ, ಕಟ್ಟಾ ಸುಬ್ರಹ್ಮಣ್ಯಂ ನಾಯ್ಡು, ಜನಾರ್ದನ ರೆಡ್ಡಿ ಅವರ ಮುಖವಾಡಗಳನ್ನು ತೊಟ್ಟು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಭಾರತೀಯ ಜೈಲು ಪಕ್ಷ ಬಿಜೆಪಿ ತೊಲಗಲಿ ಎಂದು, ಪ್ರಧಾನಿ ಮತ್ತು ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ಮನೋಹರ್ ಮಾತನಾಡಿ, ಮೋದಿ ರಾಜ್ಯ ಸರ್ಕಾರದ ಮೇಲೆ ಹುರುಳಿಲ್ಲದ ಆರೋಪ ಮಾಡಿದ್ದಾರೆ. ಭ್ರಷ್ಟಾಚಾರದೊಂದಿಗೆ ಕೈ ಜೋಡಿಸಿರುವ ಮೋದಿ ರಾಜ್ಯದ ಏಳಿಗೆ ಕಂಡು ಈ ರೀತಿ ಮಾತಾಡಿದ್ದಾರೆ ಎಂದು ಆರೋಪಿಸಿ, ಪ್ರಧಾನಿಯವರ ಹೇಳಿಕೆ ಖಂಡಿಸುತ್ತೇನೆ ಎಂದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ