ಇಂದಿರಾ ಕ್ಯಾಂಟೀನ್ ಗೆ ವಿರೋಧ..!

protest against indira canteen in mandya

06-02-2018

ಮಂಡ್ಯ: ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರಿನಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗುತ್ತಿರುವುದಕ್ಕೆ, ಕಸ್ತೂರಿ ಕನ್ನಡ ಜನಪರ ವೇದಿಕೆಯ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಮದ್ದೂರಿನ ತೋಟಗಾರಿಕೆ ಇಲಾಖೆ ಆವರಣದಲ್ಲಿ ಕ್ಯಾಂಟೀನ್ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಸಾರ್ವಜನಿಕರಿಗೆ ಅನುಕೂಲವಾಗುವ ಸ್ಥಳದಲ್ಲಿ ಕ್ಯಾಂಟೀನ್ ಸ್ಥಾಪಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಕೂಡಲೆ ಇಂದಿರಾ ಕ್ಯಾಂಟೀನ್ ನಿರ್ಮಾಣಕ್ಕೆ ಬೇರೆ ಜಾಗ ನಿಗದಿ ಮಾಡುವಂತೆ ಒತ್ತಾಯಿಸಿ, ಮದ್ದೂರು ಪಟ್ಟಣದ ತೋಟಗಾರಿಕೆ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

indira canteen protest ತೋಟಗಾರಿಕೆ ಸಾರ್ವಜನಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ