'ಹೋಮ್ ಸ್ಟೇಗಳಿಗೆ ಮದ್ಯ ಇಲ್ಲ’06-02-2018

ಬೆಂಗಳೂರು: ಹೋಮ್ ಸ್ಟೇಗಳಲ್ಲಿ ಮದ್ಯ ಮಾರಾಟ ಮತ್ತು ಸರಬರಾಜು ಮಾಡದಂತೆ ನೋಡಿಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ವಿಧಾನಸಭೆಗಿಂದು ತಿಳಿಸಿದರು. ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಕೆಲವೆಡ ನಿಯಮಗಳನ್ನು ಉಲ್ಲಂಘಿಸಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವ ಬಗ್ಗೆ ದೂರುಗಳು ಬಂದಿವೆ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದರು. ಕಳೆದ 2016 –17ನೇ ಸಾಲಿನಲ್ಲಿ ಎರಡು ಹೋಮ್ ಸ್ಟೇಗಳಲ್ಲಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟಿದ್ದ ಬಗ್ಗೆ ಪ್ರಕರಣ ದಾಖಲಿಸಿ, ದಂಡ ವಿಧಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ ಎಂದರು.

 


ಸಂಬಂಧಿತ ಟ್ಯಾಗ್ಗಳು

Home stay Drinks ಕಲಾಪ ದಂಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ