ನೇಕಾರರಿಂದ ಧರಣಿ

Weavers protest in bagalkot

07-02-2018

ಬಾಗಲಕೋಟೆ: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸ್ಥಳೀಯ ನೇಕಾರರು ಕಳೆದ 22 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಬಾಗಲಕೋಟೆಯ ತೇರದಾಳ, ರಬಕವಿ-ಬನಹಟ್ಟಿ ಪಟ್ಟಣಗಳಲ್ಲಿ ಬಂದ್ ಆಚರಿಸಲಾಗುತ್ತಿದೆ. ಉಚಿತ ವಿದ್ಯುತ್ ಪೂರೈಕೆ, ವೃತ್ತಿಪರ ನೇಕಾರರನ್ನು ಕಾರ್ಮಿಕರೆಂದು ಘೋಷಿಸುವುದು, ನೇಕಾರರ ಅಭಿವೃದ್ಧಿಗೆ ಹತ್ತು ಸಾವಿರ ಕೋಟಿ ರೂಪಾಯಿ ಹಣ ಮೀಸಲಿಡುವುದೂ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ, ರಸ್ತೆ ತಡೆ ಮತ್ತು ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ರಬಕವಿ-ಬನಹಟ್ಟಿ ನಗರಸಭೆ ಕಚೇರಿಗಳ ಮುಂದೆಯೂ ಪ್ರತಿಭಟನೆ ನಡೆಸಿದ ನೇಕಾರರು, ಶೀಘ್ರವೇ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

preotest Weavers ಆಕ್ರೋಶ ನಗರಸಭೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ