ಮಹಾಮಸ್ತಕಾಭಿಷೇಕಕ್ಕೆ ಚಾಲನೆ

president ramnath kovind inagurated Mahamastakabhisheka mahotsav

07-02-2018

ಹಾಸನ: ಶ್ರವಣಬೆಳಗೊಳದ ಗೊಮ್ಮಟೇಶ್ವರ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದರು. ಶ್ರವಣ ಬೆಳಗೊಳದ ಪಂಚಕಲ್ಯಾಣ ನಗರದಲ್ಲಿ ನಿರ್ಮಿಸಿರುವ ಚಾವುಂಡರಾಯ ಸಭಾಮಂಟಪದಲ್ಲಿ ಮಹಾಮಸ್ತಕಾಭಿಷೇಕದ ಕಾರ್ಯಗಳು ಆರಂಭವಾದವು. ಉದ್ಘಾಟನಾ ಕಾರ್ಯಕ್ರಮದಲ್ಲಿ ಜೈನ ಮಠದ ಪೀಠಾಧಿಪತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ರಾಜ್ಯಪಾಲ ವಜುಬಾಯಿವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಪ್ರಧಾನಿ ದೇವೇಗೌಡರು ಭಾಗಿಯಾಗಿದ್ದರು. ಫೆಬ್ರವರಿ 17ರಂದು ಆರಂಭವಾಗುವ 88ನೇ ಮಹಾಮಸ್ತಕಾಭಿಷೇಕ ಮಹೋತ್ಸವ, ಫೆಬ್ರವರಿ 25ರ ವರೆಗೂ ನಡೆಯಲಿದೆ. ಪ್ರತಿನಿತ್ಯ 1008 ಕಳಶಗಳಿಂದ ಗೊಮ್ಮಟೇಶ್ವರ ಸ್ವಾಮಿಗೆ ಅಭಿಷೇಕ ನಡೆಸಲಾಗುತ್ತದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ