ಪ್ರಸಾದಕ್ಕೂ ಲೈಸನ್ಸ್..!

need licence for prasadam..!

07-02-2018

ಬೆಂಗಳೂರು: ಇನ್ಮುಂದೆ ಎಂಥದ್ದೆಲ್ಲವನ್ನೂ ದೇವರ ಪ್ರಸಾದ ಎಂದು ಹಂಚುವಂತಿಲ್ಲ ಏಕೆಂದರೆ ಆಹಾರ ಸುರಕ್ಷತಾ ಇಲಾಖೆ ಹೊಸ ನಿಯಮ ಜಾರಿಗೆ ತಂದಿದೆ. ಮುಜರಾಯಿ ಇಲಾಖೆ ವ್ಯಾಪ್ತಿಯ ದೇಗುಲಗಳೂ ಸೇರಿದಂತೆ ರಾಜ್ಯದ ಎಲ್ಲ ದೇಗುಲ, ಚರ್ಚ್ ಹಾಗೂ ಮಸೀದಿಗಳಿಗೆ ನೋಟಿಸ್ ಜಾರಿ ಮಾಡಿರುವ ಆಹಾರ ಸುರಕ್ಷತಾ ಇಲಾಖೆ, ಪ್ರಸಾದ ವಿನಿಯೋಗಕ್ಕೆ ಪರವಾನಗಿ ಪಡೆಯುವಂತೆ ಸೂಚಿಸಿದೆ.
ಭಕ್ತರಿಗೆ ಪ್ರಸಾದದ ರೂಪದಲ್ಲಿ ಯಾವುದೇ ಆಹಾರ ಪದಾರ್ಥ ನೀಡುವುದಾದರೂ ಅದನ್ನು ಆಹಾರ ಸುರಕ್ಷತೆ ಇಲಾಖೆ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಬೇಕೆಂದು ಹೇಳಿದೆ. ದೇಗುಲಗಳಲ್ಲಿ ವಿತರಿಸುವ ಪ್ರಸಾದದಲ್ಲಿ ಗುಣಮಟ್ಟ ಕಾಪಾಡುವುದಿಲ್ಲ ಎನ್ನುವ ದೂರುಗಳ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಮುಂದಾಗಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ನೋಟಿಸ್ ನೀಡಿದ ನಂತರವೂ ಲೈಸನ್ಸ್ ಪಡೆಯದೆ, ಪ್ರಸಾದ ಪರೀಕ್ಷೆಗೆ ಒಳಪಡಿಸದೆ ವಿತರಣೆ ಮಾಡುವವರಿಗೆ ದಂಡ ವಿಧಿಸಲು ಆಹಾರ ಇಲಾಖೆ ನಿರ್ಧರಿಸಿದೆ.


ಸಂಬಂಧಿತ ಟ್ಯಾಗ್ಗಳು

Prasadam Food Safety ಪ್ರಯೋಗಾಲಯ ಮಸೀದಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ