ಶೌಚಾಲಯ ಬೇಕು…

NSUI shimoga protested for public toilets

07-02-2018

ಶಿವಮೊಗ್ಗ: ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಸಂಘಟನೆ NSUI ಕಾರ್ಯಕರ್ತರು, ಭದ್ರಾ ರಿವರ್ ಪ್ರಾಜೆಕ್ಟ್ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ. ಹತ್ತಿರದ ಕುವೆಂಪು ವಿವಿಗೆ ನಿತ್ಯವೂ ಸಾವಿರಾರು ವಿದ್ಯಾರ್ಥಿಗಳು, ಪೋಷಕರು ಆಗಮಿಸುತ್ತಾರೆ. ಅಲ್ಲದೆ ಸುತ್ತಮುತ್ತ ವ್ಯಾಪಾರ ವಹಿವಾಟು ನಡೆಸುವ ವರ್ತಕರು, ಹೋಟೆಲ್ ಮಾಲೀಕರು ಹಾಗೂ ಸಾರ್ವಜನಿಕರು ಶೌಚಾಲಯವಿಲ್ಲದೆ ತೊಂದರೆ ಅನುಭವಿಸುತ್ತಿದ್ದಾರೆ, ಈ ಬಗ್ಗೆ ಹತ್ತಾರು ಬಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದ್ದಾರೆ.


ಸಂಬಂಧಿತ ಟ್ಯಾಗ್ಗಳು

toilets protest ವಹಿವಾಟು ವರ್ತಕರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ