ಕದಿರೇಶನ್ ಕೊಲೆ; ಕಾಂಗ್ ಕೈವಾಡದ ಆರೋಪ

kadiresan murder: shetter allegation on congress

08-02-2018

ಬೆಂಗಳೂರು: ಕದಿರೇಶನ್ ಕೊಲೆಗೆ ಕಾಂಗ್ರೆಸ್ ಪಕ್ಷವೇ ನೇರ ಹೊಣೆ ಎಂದು, ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಹತ್ಯೆಗಳು ಹೆಚ್ಚಾಗುತ್ತಿದ್ದು, ಕಾಂಗ್ರೆಸ್ ಸರ್ಕಾರ ಇದಕ್ಕೆ ಕುಮ್ಮಕ್ಕು ನೀಡುತ್ತಿದೆ ಎಂದು ಶೆಟ್ಟರ್ ದೂರಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ಸರ್ಕಾರವೇ ಇದೆಯೋ ಇಲ್ಲವೋ ಅನ್ನೋ ಅನುಮಾನ ಮೂಡಿದೆ ಎಂದು ಟೀಕಿಸಿರುವ ಶೆಟ್ಟರ್, ಗೌರಿ ಲಂಕೇಶ್ ಹತ್ಯೆಯಾಗಿ ಹಲವು ತಿಂಗಳು ಕಳೆದರೂ ಆರೋಪಿಗಳ ಬಂಧನವಾಗಿಲ್ಲ, ಇದು ರಾಜ್ಯ ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದರು.


ಸಂಬಂಧಿತ ಟ್ಯಾಗ್ಗಳು

Jagadish Shettar Murder ಕಾಂಗ್ರೆಸ್ ಹೊಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ