ಕಂದನ ಕೊಲೆಗೈದವರು ಯಾರು?

A 2years old child murdered in bengaluru

08-02-2018

ಬೆಂಗಳೂರು: ಎರಡು ವರ್ಷದ ಮಗುವನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಗರ ಹೊರವಲಯದ ಮಾರುತಿನಗರದ ನೀಲಗಿರಿ ತೋಪಿನಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ಭುಂಕಲ್ ದೊಡ್ಡಿ ಗ್ರಾಮದ ಬಸವರಾಜ್ ಮತ್ತು ರಂಗಮ್ಮ ದಂಪತಿ ಮಗು ದಾರುಣವಾಗಿ ಸಾವನ್ನಪ್ಪಿದೆ. ಇವರು ಕಳೆದ ಕೆಲವು ವರ್ಷಗಳಿಂದ ನಗರದಲ್ಲಿ ನೆಲೆಸಿದ್ದರು. ಎರಡು ದಿನಗಳ ಹಿಂದೆ ಪಕ್ಕದ ಮನೆಯವರೊಂದಿದೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ, ಇದಾದ ನಂತರ ಮಗು ಮೃತಪಟ್ಟಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿದೆ. ಸೋಲದೇವನಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

child murder suspecious ಉಸಿರುಗಟ್ಟಿಸಿ ಜಗಳ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ