ಬಿಜೆಪಿ ನಾಯಕರೇ ಟಾರ್ಗೆಟ್ಟಾ?

BJP leader ravi kumar blames siddaramaiah

08-02-2018

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ನಾಯಕರೇ ಕೊಲೆ ಆಗ್ತಿದ್ದಾರೆ ಯಾಕೆ? ಎಂದು ಬಿಜೆಪಿ ಮುಖಂಡ ರವಿಕುಮಾರ್ ಪ್ರಶ್ನಿಸಿದ್ದಾರೆ.  ನಗರದಲ್ಲಿ ನಡೆದ ಕದಿರೇಶ್ ಕೊಲೆಗೆ ಸರ್ಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರೇ ಹೊಣೆ, ಈ ಪ್ರಕರಣದಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡಬೇಕು ಎಂದು ರವಿಕುಮಾರ್ ಆಗ್ರಹಿಸಿದರು. ಸಂತೋಷ್ ನಂತರ ಬಿಜೆಪಿಯ ಮತ್ತೊಬ್ಬ ದಲಿತ ನಾಯಕ ಕದಿರೇಶ್ ಹತ್ಯೆಯಾಗಿದೆ, ರಾಜ್ಯದಲ್ಲಿ ದಲಿತರ ಪಾಲಿಗೆ ಸರ್ಕಾರ ಸತ್ತುಹೋಗಿದೆ, ಇಲ್ಲಿ ರೌಡಿಗಳೇ ಆಳ್ವಿಕೆ ನಡೆಸುತ್ತಿದ್ದಾರೆ ಎಂದು ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ಮಾನಮರ್ಯಾದೆ ಇದ್ದರೆ, ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಕೊಲೆಗಾರರನ್ನು ಬಂಧಿಸಬೇಕು ಎಂದು ರವಿಕುಮಾರ್ ಒತ್ತಾಯಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ravi kumar kadiresan ದಲಿತ ಮುಖಂಡ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ