ರಾಜ್ಯದಲ್ಲಿ ಆಡಳಿತವೇ ಇಲ್ಲ…

No law and order in state: kumaraswamy

08-02-2018

ಮಂಡ್ಯ: ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕೆಟ್ಟು ಹೋಗಿದ್ದು, ಪೊಲೀಸರಿಗೇ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರ ಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಠಮಾನ್ಯಗಳ ವಶಕ್ಕೆ ಮುಂದಾಗಿರುವ ರಾಜ್ಯಸರ್ಕಾರದ ನಿರ್ಣಯ ಸರಿಯಲ್ಲ ಎಂದು ಕುಮಾರ ಸ್ವಾಮಿ ಟೀಕಿಸಿದ್ದಾರೆ. ಸರ್ಕಾರದವರು ಮಠಗಳ ವಶಕ್ಕೆ ಮುಂದಾದರೆ, ನಾನು ಮಠ ಬಿಡುತ್ತೇನೆ ಎಂಬ ರೀತಿಯಲ್ಲಿ ಪೇಜಾವರ ಶ್ರೀಗಳು ಹೇಳಿಕೆ ನೀಡಬಾರದಿತ್ತು, ಮಠಗಳು ಧರ್ಮ ರಕ್ಷಣೆಗೆ ಮುಂದಾಗಬೇಕು, ಅವು ಸಮಾಜದಲ್ಲೇ ಇದ್ದು, ಸಮಸ್ಯೆಗಳನ್ನು ಎದುರಿಸಬೇಕು ಎಂದು ಅಭಿಪ್ರಾಯಪಟ್ಟರು. ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆ, ಇದೇ ತಿಂಗಳ 17ರಂದು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy administration ಸರ್ಕಾರ ಮಠಮಾನ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ