ಮತ್ತೊಂದು ಮುಷ್ಕರ; ಗ್ರಾಮ ಸಹಾಯಕರ ಸರದಿ

on more huge protest in bengalur..!

08-02-2018

ಬೆಂಗಳೂರು: ಗ್ರಾಮ ಸಹಾಯಕರ ಹುದ್ದೆಯನ್ನು ಡಿ ದರ್ಜೆಗೇರಿಸಿ ಸೇವಾ ಭದ್ರತೆ ಒದಗಿಸುವಂತೆ ಒತ್ತಾಯಿಸಿ ಕಂದಾಯ ಇಲಾಖೆ ಗ್ರಾಮ ಸಹಾಯಕರು ನಗರದಲ್ಲಿ ಮುಷ್ಕರ ಆರಂಭಿಸಿದ್ದಾರೆ. ರಾಜ್ಯದ ವಿವಿಧೆಡೆಗಳಿಂದ ಬಂದಿದ್ದ ನೂರಾರು ಗ್ರಾಮ ಸಹಾಯಕರು, ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ ವರೆಗೆ ಮೆರವಣಿಗೆ ಮೂಲಕ ಬಂದು ಮುಷ್ಕರ ಆರಂಭಿಸಿದರು.
2007ರಲ್ಲಿ 10,450 ಗ್ರಾಮ ಸಹಾಯಕರ ಹುದ್ದೆಗಳನ್ನು ಖಾಯಂಗೊಳಿಸಲಾಗಿದೆ. ಆದರೆ, ಈ ವರೆಗೆ ಹುದ್ದೆಗೆ ತಕ್ಕಂತೆ ಮೂಲ ವೇತನ ಪರಿಷ್ಕರಣೆಯಾಗಿಲ್ಲ. ಗ್ರಾಮ ಸಹಾಯಕರನ್ನು 'ಡಿ' ದರ್ಜೆ ನೌಕರರೆಂದು ಪರಿಗಣಿಸಿ ಸೇವಾನಿಯಮಾವಳಿ ರೂಪಿಸಬೇಕೆಂದು ಸರ್ಕಾರವನ್ನು ಹಲವು ಬಾರಿ ಒತ್ತಾಯಿಸಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರರು ದೂರಿದರು.


ಸಂಬಂಧಿತ ಟ್ಯಾಗ್ಗಳು

income tax group D ಸಹಾಯಕ ಪರಿಷ್ಕರಣೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ