ರಾಜ್ಯ ಬಿಜೆಪಿಗೆ ಮೋದಿ ಪವರ್…

again modi public meetings in karnataka..?

08-02-2018

ಬೆಂಗಳೂರು: ನೀರಸವೆಂಬಂತೆ ಕಂಡುಬರುತ್ತಿರುವ ಬಿಜೆಪಿ ಚುನಾವಣಾ ಪ್ರಚಾರಕ್ಕೆ ರಂಗು ತುಂಬಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ, ರಾಜ್ಯದ ಎಲ್ಲಾ ವಿಭಾಗಗಳಲ್ಲೂ ತಲಾ ಒಂದೊಂದು ಸಮಾವೇಶ ನಡೆಸಿ ಭಾಷಣ ಮಾಡಲು ನಿರ್ಧರಿಸಿದ್ದಾರೆ. ಚುನಾವಣೆ ಘೋಷಣೆಗೂ ಮುನ್ನವೇ ಬಿಜೆಪಿ ಪರ ಪ್ರಚಾರವನ್ನು ಚುರುಕುಗೊಳಿಸಲು ನಿರ್ಧರಿಸಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ಸ್ವತಃ ಪ್ರಧಾನಿ ಕಚೇರಿ, ಈ ಸಂಬಂಧ ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಸೂಚನೆ ರವಾನಿಸಿದ್ದು, ಚುನಾವಣಾ ವೇಳಾ ಪಟ್ಟಿ ಪ್ರಕಟಣೆಗೂ ಮೊದಲು ಒಂದು ಸುತ್ತಿನ ಸಮಾವೇಶಕ್ಕೆ ಸಿದ್ಧತೆ ಆರಂಭಿಸುವಂತೆ ನಿರ್ದೇಶನ ನೀಡಿದೆ. ಸದ್ಯದ ಪರಿಸ್ಥಿತಿಯಲ್ಲಿ, ಐದು ಬಾರಿ ಸಮೀಕ್ಷೆ ನಡೆದರೂ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುತ್ತದೆ ಎಂದು ಹೇಳಲಾಗದ ಸ್ಥಿತಿಯಿದ್ದು, ಇದನ್ನು ಬಿಜೆಪಿ ನಾಯಕರು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಡಳಿತಾರೂಢ ಕಾಂಗ್ರೆಸ್ ಪ್ರಬಲ ಪೈಪೋಟಿ ನೀಡುತ್ತಿರುವುದರಿಂದ ರಾಜ್ಯದಲ್ಲಿ ಅತಂತ್ರ ವಿಧಾನಸಭೆ ವಾತಾವರಣ ಕಾಣುತ್ತಿದೆ. ಜೆಡಿಎಸ್ ಜೊತೆ ಕೈ ಜೋಡಿಸಿ ಸರ್ಕಾರ ರಚಿಸುವ ಸಾಧ್ಯತೆ ಬೇರೆ ಪ್ರಶ್ನೆ, ಆದರೆ ಅದಕ್ಕೂ ಮುನ್ನ ಸ್ವಂತಬಲದ ಮೇಲೆ ಅಧಿಕಾರಕ್ಕೆ ಬರಲು ಯತ್ನಿಸಬೇಕು ಎಂಬುದು ದಿಲ್ಲಿ ನಾಯಕರು ರಾಜ್ಯ ಬಿಜೆಪಿ ಘಟಕಕ್ಕೆ ನೀಡಿರುವ ಸೂಚನೆ. ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಬರಲು ಈಗಾಗಲೇ ಐದರಿಂದ ಆರು ಶಾಸಕರು ಸಜ್ಜಾಗಿದ್ದು, ಮೋದಿಯವರು ರಾಜ್ಯಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಕಮಲ ಪಾಳೆಯಕ್ಕೆ ಸೇರ್ಪಡೆಯಾಗಲಿ ಎಂದು ಹೈಕಮಾಂಡ್ ಹೇಳಿದೆಯಂತೆ.


ಸಂಬಂಧಿತ ಟ್ಯಾಗ್ಗಳು

Narendra Modi election ಗಂಭೀರ ಕಮಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ