ಇಂದು ದುಬೈಗೆ ಪ್ರಯಾಣ ಬೆಳೆಸಿದ ಸಿಎಂ ಸಿದ್ದರಾಮುಯ್ಯ

Kannada News

27-04-2017

ಬೆಂಗಳೂರು : ಮೂರು ದಿನಗಳ ಪ್ರವಾಸಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮುಯ್ಯ ಅವರು ಇಂದು ದುಬೈಗೆ ಪ್ರಯಾಣ ಬೆಳೆಸಿದರು. ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿದೇಶ ಪ್ರಯಾಣಕ್ಕೆ ಶುಭ ಕೋರಿದರು.  ಕರ್ನಾಟಕ ಅನಿವಾಸಿ ಭಾರತೀಯರ ವೇದಿಕೆ ಉದ್ಘಾಟನೆ, ಕೈಗಾರಿಕೋದ್ಯಮಿಗಳ ಜೊತೆ ಮಾತುಕತೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಿ ಭಾನುವಾರ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ