2400 ಕೋಟಿ ರೂ ಆಸ್ತಿ ತೆರಿಗೆ ಸಂಗ್ರಹ

Rs 2400 crore property tax collected BBMP

08-02-2018

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ2017-18 ಸಾಲಿನಲ್ಲಿ ನಗರದ ವಿವಿಧ ಆಸ್ತಿಗಳಿಂದ 2400 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಲಾಗಿದೆ ಎಂದು ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಎಂ.ಶಿವರಾಜು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ 2600 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿತ್ತು. ಈಗಾಗಲೇ 17 ಲಕ್ಷ 3 ಸಾವಿರದ 824 ಆಸ್ತಿ ಮಾಲೀಕರಿಂದ ತೆರಿಗೆ ವಸೂಲಿ ಮಾಡಲಾಗಿದ್ದು, ಇನ್ನು ಒಂದೂವರೆ ತಿಂಗಳಲ್ಲಿ ಬಾಕಿ ಇರುವ ಎಲ್ಲಾ ತೆರಿಗೆಯನ್ನು ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು. ಫೆಬ್ರವರಿ ಕೊನೆಯ ವಾರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಬಜೆಟ್ ಮಂಡನೆಗೆ ಎಲ್ಲ ರೀತಿಯ ಸಿದ್ಧತೆಗಳು ನಡೆಯುತ್ತಿದೆ ಎಂದು ಇದೇ ವೇಳೆ ಶಿವರಾಜು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Tax BBMP ಅಧಿಕಾರಿ ಬಜೆಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ