ಕರ್ತವ್ಯ ಲೋಪ; ಪಿಎಸ್ಐ ಅಮಾನತು

Duty omission PSI suspended

09-02-2018

ಬೆಂಗಳೂರು: ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಮತ್ತು ಪೇದೆಯೊಬ್ಬರನ್ನು ಅಮಾನತು ಮಾಡಲಾಗಿದೆ. ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಕಾಗವಾಡ ಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಸಮೀರ್ ಮುಲ್ಲಾ, ಪೇದೆ ಆರ್.ಎ.ಕಮತೆ ಎಂಬುವರನ್ನು ಅಮಾನತು ಮಾಡಿ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅಥಣಿ ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ನಡೆದಿದ್ದ ಪುಂಡಲೀಕ್ ಕಾಂಬಳೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಗಳನ್ನು ಬಂಧಿಸುವಲ್ಲಿ ಕರ್ತವ್ಯ ಲೋಪ ಆರೋಪ ಹಿನ್ನೆಲೆ ಅಮಾನತು ಮಾಡಲಾಗಿದೆ.


ಸಂಬಂಧಿತ ಟ್ಯಾಗ್ಗಳು

PSI suspend ವರಿಷ್ಠಾಧಿಕಾರಿ ಕರ್ತವ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ