ಮಿಲ್ಕ್ ಕಳ್ಳ ಮೇಷ್ಟ್ರು!

ksheera bhagya milk misused by school headmaster

09-02-2018

ಮೈಸೂರು: ಶಾಲಾ ಮಕ್ಕಳಿಗೆ ಹಾಲು ಪೂರೈಸುವ ಸರ್ಕಾರದ ಮಹಾತ್ವಾಕಾಂಕ್ಷೆಯ ಕ್ಷೀರಭಾಗ್ಯ ಯೋಜನೆ ಹಾಲನ್ನು ಶಿಕ್ಷಕನೇ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯ ನಂಜನಗೂಡು ತಾಲ್ಲೂಕು ತರಗನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಪ್ರಕಾಶ್ ಆಚಾರ್ಯ ಎಂಬುವರು ಈ ಕೃತ್ಯ ಎಸಗಿದ್ದಾರೆ. ಕಳೆದ ಎರಡು ವರ್ಷಗಳಿಂದಲೂ ಹೀಗೆ ಮಾಡುತ್ತಿದ್ದು, ಇದರಲ್ಲಿ ಸಹ ಶಿಕ್ಷಕ ಶಿವಲಿಂಗಪ್ಪನೂ ಭಾಗಿಯಾಗಿದ್ದಾನೆ ಎಂದು ತಿಳಿದು ಬಂದಿದೆ. ಪ್ರತಿ ದಿನವೂ ಅಕ್ರಮವಾಗಿ ಸುಮಾರು 25 ಪ್ಯಾಕೆಟ್ ಹಾಲು ಮಾರಾಟ ಮಾಡುತ್ತಿದ್ದ ಶಿಕ್ಷಕ, ಇಂದು ನೇರವಾಗಿ ಸಿಕ್ಕಿಬಿದ್ದಿದ್ದಾನೆ. ಮಕ್ಕಳಿಗೆ ಸೇರಬೇಕಾದ ಹಾಲನ್ನು ಮಾರುತ್ತಿದ್ದ ಶಿಕ್ಷಕರನ್ನು ಕಂಡು ರೊಚ್ಚಿಗೆದ್ದ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಕುರಿತು ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷಕರನ್ನು ವಿಚಾರಣೆಗೊಳಪಡಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

ksheera bhagya Head master ಶಿಕ್ಷಕ ಪ್ಯಾಕೆಟ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ