ಬಿಸಿಯಾಯ್ತು ಬಿಸಿಯೂಟದವರ ಪ್ರತಿಭಟನೆ

Deadline given by Bisi oota protesters to govt

09-02-2018

ಬೆಂಗಳೂರು: ಕನಿಷ್ಠ ವೇತನಕ್ಕಾಗಿ ಆಗ್ರಹಿಸಿ ನಗರದ ಫ್ರೀಡಂಪಾರ್ಕ್ ಬಳಿ ಬಿಸಿಯೂಟ ತಯಾರಕ ಸಿಬ್ಬಂದಿ ನಡೆಸುತ್ತಿರುವ ಹೋರಾಟ ತೀವ್ರಗೊಳ್ಳುತ್ತಿದೆ. ಸರ್ಕಾರ ತಕ್ಷಣವೇ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಹೋರಾಟ ತೀವ್ರಗೊಳಿಸುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಕೆಳಹಂತದ ಅಧಿಕಾರಿಗಳು ಬಂದಿದ್ದಾರೆ ಆದರೆ, ನಿರ್ಣಯ ಕೈಗೊಳ್ಳುವ ಅಧಿಕಾರ ಅವರಿಗಿಲ್ಲ, ನಾವು ಹೋರಾಟ ನಡೆಸುತ್ತಿದ್ದರೂ ಶಿಕ್ಷಣ ಸಚಿವರು ಮತ್ತು ಮುಖ್ಯಮಂತ್ರಿಗಳು ಇತ್ತ ಗಮನ ಹರಿಸಿಲ್ಲ, ಇಂದು ವಿಧಾನ ಮಂಡಲ ಅಧಿವೇಶನದ ಕೊನೆಯದಿನ, ಇವತ್ತಾದರೂ ಸರ್ಕಾರ ಸ್ಪಂದಿಸದಿದ್ದರೆ ಮುಂದಾಗುವುದಕ್ಕೆ ಸರ್ಕಾರವೇ ಜವಾಬ್ದಾರಿ ಎಂದು ಸಿಐಟಿಯು ರಾಜ್ಯಾಧ್ಯಕ್ಷೆ ವರಲಕ್ಷ್ಮಿ ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Bisi oota protest ಫ್ರೀಡಂಪಾರ್ಕ್ ಸಿಐಟಿಯು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ