ಗ್ರಾಮ ಸಹಾಯಕರಿಗೆ ಭರವಸೆ

kagodu thimmappa given hope for Village Assistants?

09-02-2018

ಬೆಂಗಳೂರು: ರಾಜ್ಯದ 10 ಸಾವಿರಕ್ಕೂ ಹೆಚ್ಚು ಗ್ರಾಮ ಸಹಾಯಕರನ್ನು ಡಿ ದರ್ಜೆ ನೌಕರರೆಂದು ಪರಿಗಣಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹಾಗೂ ಜೆಡಿಎಸ್ ಶಾಸಕ ಕೋನರೆಡ್ಡಿ ಅವರು ನಿಯಮ 69ರ ಅಡಿ ಮಾಡಿದ ಪ್ರಸ್ತಾಪಕ್ಕೆ ಉತ್ತರಿಸಿದ ಕಾಗೋಡು ತಿಮ್ಮಪ್ಪ, ಮುಖ್ಯಮಂತ್ರಿಗಳ ಜೊತೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ಪ್ರಸ್ತಾಪ ಸಲ್ಲಿಸಿದ್ದೇವೆ ಎಂದರು. ಈ ವಿಷಯದಲ್ಲಿ ಸದನ ವ್ಯಕ್ತಪಡಿಸುವ ಅಭಿಪ್ರಾಯಕ್ಕೆ ತಮ್ಮ ಸಹಮತವಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.


ಸಂಬಂಧಿತ ಟ್ಯಾಗ್ಗಳು

kagodu thimmappa Tax department ನೌಕರ ಅಭಿಪ್ರಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ