ಹೆಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ ವಿಚಾರ ಹಿನ್ನೆಲೆ ಡಾ.ಜಿ.ಪರಮೇಶ್ವರ್ ಹೇಳಿಕೆ

Kannada News

27-04-2017

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ ವಿಚಾರ ಕುರಿತು ಅವರು ನಮ್ಮ ಪಕ್ಷ ಬಿಡುವುದಿಲ್ಲ ಎಂಬ ವಿಶ್ವಾಸ ನನಗಿದೆ. ಪಕ್ಷ ಬಿಡುವುದು ಅವರ ವೈಯಕ್ತಿಕ ವಿಚಾರ. ವಿಶ್ವನಾಥ್ ನಮ್ಮ ಪಕ್ಷದಲ್ಲಿ ಇರುವುದು ಒಳ್ಳೆಯದು. ಚುನಾವಣೆ ಸಂದರ್ಭದಲ್ಲಿ ಕೆಲವರು ಪಕ್ಷ ಬಿಡುವುದು ಮತ್ತು ಸೇರುವುದು ಸಾಮಾನ್ಯ. ಇನಾಂ ದತ್ತಾತ್ರೇಯಪೀಠ ವಿವಾದದಲ್ಲಿ ಸುಪ್ರೀಂಕೋರ್ಟ್ ಅದೇಶವನ್ನ ರಾಜ್ಯಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ ಉಪಸಮಿತಿ ರಚನೆ ಮಾಡಿದೆ. ಉಪಸಮಿತಿ ವರದಿ ನೀಡಿದ ನಂತರ ಕ್ಯಾಬಿನೆಟ್ ನಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ದತ್ತಪೀಠ ವಿವಾದದಲ್ಲಿ ಗೊಂದಲ ಸೃಷ್ಟಿಮಾಡುವವರು ಇದ್ದಾರೆ. ಇದೇನು ಹೊಸದಲ್ಲ, ಕ್ಯಾಬಿನೆಟ್ ತಿರ್ಮಾನ ಕೈಗೊಳ್ಳುವವರೆಗೂ ಕಾಯಬೇಕು ಎಂದು ಹೇಳಿದರು.

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ