ಗೊಮ್ಮಟೇಶ್ವರನ ಸನ್ನಿಧಿಯಲ್ಲಿ ವೆಂಕಯ್ಯ ನಾಯ್ಡು

venkaayya naidu in Shravanabelagola

10-02-2018

ಹಾಸನ: ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಗೊಮ್ಮಟೇಶ್ವರನ ಮಹಾ ಮಸ್ತಕಾಭಿಷೇಕ ಮಹೋತ್ಸವದ ಅಂಗವಾಗಿ ನಡೆದ ರಾಜ್ಯಾಭಿಷೇಕ ಕಾರ್ಯಕ್ರಮಕ್ಕೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಚಾಲನೆ ನೀಡಿದರು. ಚಾವುಂಡರಾಯ ಸಭಾ ಮಂಟಪದಲ್ಲಿ ಆದಿನಾಥ ತೀರ್ಥಂಕರರ ಪಂಚಕಲ್ಯಾಣ ಮಹೋತ್ಸವ ನಡೆಯುತ್ತಿದ್ದು, ಇಂದು ರಾಜ್ಯಾಭಿಷೇಕ ನೆರವೇರಿತು. ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮತ್ತು ವರ್ಧಮಾನಸಾಗರ ದಿಗಂಬರ ಮುನಿಗಳು ಸಾನಿಧ್ಯ ವಹಿಸಿದ್ದರು. ರಾಜ್ಯಪಾಲ ವಜುಬಾಯಿ ವಾಲಾ, ಕೇಂದ್ರ ಸಚಿವ ಅನಂತ್ ಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಶಾಸಕ ಬಾಲಕೃಷ್ಣ ಹಾಜರಿದ್ದರು. ಸಂಪ್ರದಾಯಂತೆ, ಆದಿನಾಥ ತೀರ್ಥಂಕರ ಮೂರ್ತಿಗೆ ಕಿರೀಟ. ಚಿನ್ನದ ಸರ ತೊಡಿಸುವ ಮೂಲಕ ರಾಜ್ಯಾಭಿಷೇಕಕ್ಕೆ ಚಾಲನೆ ನೀಡಲಾಯಿತು.


ಸಂಬಂಧಿತ ಟ್ಯಾಗ್ಗಳು

venkaayya naidu Shravanabelagola ರಾಜ್ಯಾಭಿಷೇಕ ಕಿರೀಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ