ಮೃತರ ಸಂಖ್ಯೆ ಮೂರಕ್ಕೇರಿಕೆ

Contaminated water another one died: total 3

12-02-2018

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲ್ಲೂಕಿನ ಮೈದೊಳು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಪ್ಪ-ಮಗ ಮೃತ ಪಟ್ಟ ಘಟನೆ ನಿನ್ನೆ ನಡೆದಿದ್ದು, ಇಂದು ಮತ್ತೊಬ್ಬರು ಮೃತಪಟ್ಟು ಮೃತರ ಸಂಖ್ಯೆ ಮೂರಕ್ಕೆ ಏರಿದೆ.

ಕಲುಷಿತ ನೀರು ಸೇವಿಸಿ ಅಸ್ವಸ್ಥರಾದ ಒಂದೇ ಕುಟುಂಬದ ಶಿವಪ್ಪ (75), ಹನುಮಂತ (35) ಮತ್ತು ಸಿದ್ದಮ್ಮ (30) ಮೂವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ತಂದೆ-ಮಗ ಮೃತಪಟ್ಟಿದ್ದಾರೆ. ಇಂದು ಬೆಳಿಗ್ಗೆ ತೀವ್ರ ಅಸ್ವಸ್ಥಗೊಂಡಿದ್ದ ಮತ್ತೊಬ್ಬರು ಮೃತಪಟ್ಟಿದ್ದಾರೆ.

ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಗ್ರಾಮದಲ್ಲಿ 45 ಕ್ಕೂ ಹೆಚ್ಚು ಜನ ಅಸ್ವಸ್ಥರಾಗಿ, ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಖಾಸಗಿ ಕ್ಲಿನಿಕ್‍ಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅದರಲ್ಲಿ ತೀವ್ರ ಅಸ್ವಸ್ಥರಾದ 13ಜನರನ್ನು ಶಿವಮೊಗ್ಗದ ಮೆಗ್ಗಾನ್, ಮ್ಯಾಕ್ಸ್ ಹಾಗು ಸುಬ್ಬಯ್ಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಮುನ್ನಚರಿಕೆ ಕ್ರಮವಾಗಿ ಗ್ರಾಮಾಡಳಿತ ಕುದಿಸಿ ಆರಿಸಿದ ನೀರನ್ನು ಬಳಸುವಂತೆ ಗ್ರಾಮದಲ್ಲಿ ಸೂಚನೆ ನೀಡಿದೆ. ಗ್ರಾಮಕ್ಕೆ ಶಿವಮೊಗ್ಗ ಡಿಎಚ್‍ಒ ಹನುಮಂತಪ್ಪ, ತಾಲ್ಲೂಕು ವೈದ್ಯಾಧಿಕಾರಿ ಡಾ.ಗುಡುದಪ್ಪ ಕಸಬಿ ಮತ್ತು ತಂಡ  ಭೇಟಿ ನೀಡಿ ಪರಿಶೀಲನೆ ನಡೆಸಿ, ನೀರಿನ ಮೂಲಗಳಿಂದ ನೀರಿನ ಸ್ಯಾಂಪಲ್‍ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Contaminated DHO ಕುಟುಂಬ ಪ್ರಯೋಗಾಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ