ಮಳೆಗೆ ರೈತರ ಹಿಡಿ ಶಾಪ

Hailstone rain crops destroyed

12-02-2018

ಗದಗ: ಅಕಾಲಿಕ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಕೈಸೇರಬೇಕಿದ್ದ ಬೆಳೆಗೆ ಆಲಿಕಲ್ಲು ಕುತ್ತು ತಂದಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲ್ಲೂಕಿನ ವೆಂಕಟಾಪುರ, ಹಳ್ಳಿಗುಡಿ, ಜಂತ್ಲಿಶಿರೂರು ಗ್ರಾಮಗಳಲ್ಲಿ ಬೆಳೆದು ನಿಂತಿದ್ದ, ಜೋಳ, ಹತ್ತಿ, ಗೋಧಿ ನೆಲಕಚ್ಚಿದೆ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದ ಕೋಟ್ಯಾಂತರ ಬೆಲೆಬಾಳುವ ಬೆಳೆ ಮಣ್ಣುಪಾಲಾಗಿದೆ. ಬೆಳೆ ಹಾನಿಯಿಂದ ರೈತರು ಮಳೆರಾಯನಿಗೆ ಹಿಡಿಶಾಪ ಹಾಕುತ್ತಿದ್ದಾರೆ. ಈ ಕುರಿತು ಕೃಷಿ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾರದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Farmers crop ಹಿಡಿಶಾಪ ಎಕರೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ