ಸರಣಿ ಅಪಘಾತ ಮಹಿಳೆ ಸಾವು

A chain Accident in bengaluru: women died

12-02-2018

ಬೆಂಗಳೂರು: ನಗರದ ಹೊರವರ್ತುಲ ರಸ್ತೆಯಲ್ಲಿ ನಡೆದ ಸರಣಿ ಅಪಘಾತದಲ್ಲಿ, ಮಹಿಳೆಯೊಬ್ಬರು ಸಾವನ್ನಪ್ಪಿದ್ದರೇ, ಮತ್ತಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಾಬುಸಾ ಪಾಳ್ಯದ ರಸ್ತೆಯಲ್ಲಿ ವೇಗವಾಗಿ ಹೋಗುತ್ತಿದ್ದ ಕ್ಯಾಂಟರ್ ಮುಂದೆ ಹೋಗುತ್ತಿದ್ದ ಟಾಟಾ ಏಸ್, ಪಲ್ಸರ್ ಬೈಕ್ ಹಾಗೂ ಕೆಎಸ್‍ಆರ್‍ಟಿಸಿ ಬಸ್‍ಗೆ ಡಿಕ್ಕಿ ಹೊಡೆದಿದೆ.

ಮೃತ ಮಹಿಳೆಯನ್ನು ಬೂದಿಗೆರೆಯ ಸಲ್ಮಾ ಆಯೇಷಾ (28)ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪತಿ ಚಾಂದ್ ಪಾಷಾ ಹಾಗೂ ಇಬ್ಬರು ಮಕ್ಕಳು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೂದಿಗೆರೆಯಿಂದ ಸಾರಾಯಿಪಾಳ್ಯದ ಸಂಬಂಧಿಕರ ಮನೆಗೆ ಚಾಂದ್ ಪಾಷಾ, ಪತ್ನಿ ಸಲ್ಮಾ ಹಾಗೂ ಇಬ್ಬರು ಮಕ್ಕಳನ್ನು ಪಲ್ಸರ್ ಬೈಕ್‍ನಲ್ಲಿ ರಾತ್ರಿ 9.40ರ ವೇಳೆ ಹೋಗುತ್ತಿದ್ದರು. ಮಾರ್ಗಮಧ್ಯೆ ಬಾಬುಸಾ ಪಾಳ್ಯದ ರಸ್ತೆಯಲ್ಲಿ ಹಿಂದಿನಿಂದ ಬಂದ ಕ್ಯಾಂಟರ್ ಟಾಟಾ ಏಸ್‍ಗೆ ಡಿಕ್ಕಿ ಹೊಡೆದು ಟಾಟಾ ಏಸ್, ಬೈಕ್‍ಗೆ ಗುದ್ದಿದೆ. ಬೈಕ್ ಮುಂದೆ ಹೋಗುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗೆ ಅಪ್ಪಳಿಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಯೇಷಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಿಂದ ನಾಲ್ಕು ವಾಹನಗಳಿಗೆ ಹಾನಿಯಾಗಿದ್ದು, ಕ್ಯಾಂಟರ್ ಚಾಲಕನನ್ನು ಬಂಧಿಸಿರುವ ಬಾಣಸವಾಡಿ ಸಂಚಾರ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಅಭಿಷೇಕ್ ಗೋಯಲ್ ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Ring road Accident ಸಂಚಾರ ತನಿಖೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ