ರಾಹುಲ್ ಗಾಂಧಿ ದಿನಚರಿ

Today

13-02-2018 532

ಕಲಬುರ್ಗಿ: ರಾಜ್ಯ ಪ್ರವಾಸದಲ್ಲಿರುವ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮಾಜಿ ಸಚಿವ ದಿವಂಗತ ಖಮರುಲ್ ಇಸ್ಲಾಂ ಹಾಗೂ ಮಾಜಿ ಸಿಎಂ ದಿವಂಗತ ಧರ್ಮಸಿಂಗ್ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ನಂತರ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯಲಿರುವ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. ಬಳಿಕ ಬಸವಣ್ಣನವರ ಕರ್ಮ ಭೂಮಿ ಬೀದರ್ ನ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದಾರೆ.  ಆ ನಂತರ ಜನಾಶೀರ್ವಾದ ಕಾರ್ಯಕ್ರಮದ ಹಿನ್ನೆಲೆ, ಬೀದರ್ ನ ಬಸವಕಲ್ಯಾಣದ ತೇರು ಮೈದಾನದಲ್ಲಿ ಬಹಿರಂಗ ಸಮಾವೇಶದಲ್ಲಿ ಮಾತನಾಡಲಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rahul Gandhi AICC ಬಸವಕಲ್ಯಾಣ ಅನುಭವ ಮಂಟಪ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ