ಒಂದೇ ಕುಟುಂಬದ ಮೂವರ ಆತ್ಮಹತ್ಯೆ

3 suicide from same family in Ramanagara

13-02-2018 433

ರಾಮನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆಯು ರಾಮನಗರದಲ್ಲಿ ನಡೆದಿದೆ. ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಂಡ ಹೆಂಡತಿ ಹಾಗೂ ಒಂದೂವರೆ ವರ್ಷದ ಗಂಡು ಮಗು ಮೃತಪಟ್ಟಿದೆ. ಜಿಲ್ಲೆಯ ಕನಕಪುರ ತಾಲ್ಲೂಕಿನಲ್ಲಿ ರೇಷ್ಮೆ ಗೂಡು ವ್ಯಾಪಾರ ಮಾಡುತ್ತಿದ್ದ ಸೋಮಶೇಖರ್(36) ಈತನ ಪತ್ನಿ ಸುಧಾ(27), ಒಂದೂವರೆ ವರ್ಷದ ಮಗು ಪ್ರೀತಂ ಮೃತ ದುರ್ವೈವಿಗಳು. ಸಾಲಬಾಧೆ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಕನಕಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Suicide Family ಗ್ರಾಮಾಂತರ ದುರ್ವೈವಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ