ಅಸ್ವಸ್ಥರ ಆರೋಗ್ಯ ವಿಚಾರಿಸಿದ ಬಿಎಸ್ ವೈ

Yeddyurappa visits max hospital in shimoga

13-02-2018

ಶಿವಮೊಗ್ಗ: ಕಳೆದೆರಡು ದಿನಗಳ ಹಿಂದೆ ಭದ್ರಾವತಿ ತಾಲ್ಲೂಕಿನ ಮೈದೊಳಲು ಗ್ರಾಮದಲ್ಲಿ ಕಲುಷಿತ ನೀರು ಕುಡಿದು ತೀವ್ರ ಅಸ್ವಸ್ಥಗೊಂಡಿರುವವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಭೇಟಿ ಮಾಡಿದ್ದಾರೆ. ನಗರದ ಮ್ಯಾಕ್ಸ್ ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥಗೊಂಡವರ ಆರೋಗ್ಯ ವಿಚಾರಿಸಿದರು. ಕಲುಷಿತ ನೀರಿನಿಂದ ಸುಮಾರು 45 ಮಂದಿ ಅಸ್ವಸ್ಥಗೊಂಡಿದ್ದು, 26 ಮಂದಿ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೇಟಿ ನಂತರ ಮಾತನಾಡಿದ ಯಡಿಯೂರಪ್ಪ, ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ, ಎಲ್ಲಾ ಓವರ್ ಹೆಡ್ ಟ್ಯಾಂಕ್ ಗಳನ್ನು ಪ್ರತಿ ಆರು ತಿಂಗಳಿಗೊಮ್ಮೆ ಸ್ವಚ್ಛ ಮಾಡಿಸಲಿ ಎಂದು ಆಗ್ರಹಿಸಿದ್ದಾರೆ. ಕಲುಷಿತ ನೀರು ಕುಡಿದು ಮೂವರು ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿದ್ದು ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿಸಿದರು. ಯಡಿಯೂರಪ್ಪಗೆ ಅವರ ಪುತ್ರ ಬಿ.ವೈ.ರಾಘವೇಂದ್ರ ಸಾಥ್ ನೀಡಿದ್ದು, ಜೊತೆಗೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತಿ ಸಿಇಒ ಉಪಸ್ಥಿತರಿದ್ದರು.


ಸಂಬಂಧಿತ ಟ್ಯಾಗ್ಗಳು

B.S.Yeddyurappa Hospital ಪಂಚಾಯತಿ ಸರ್ಕಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ