ಮಗುವಿಗೆ ಮುಳುವಾಯಿತು ಅವಲಕ್ಕಿ

3 years child died because of avalakki

13-02-2018

ಚಿಕ್ಕಮಗಳೂರು: ಗಂಟಲಲ್ಲಿ ಅವಲಕ್ಕಿ ಸಿಕ್ಕಿಕೊಂಡು ಮೂರು ವರ್ಷದ ಬಾಲಕ ಮೃತಪಟ್ಟಿರುವ ಫಟನೆ ಚಿಕ್ಕಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ಮೂಗ್ತಿಹಳ್ಳಿಯ  ದುರ್ಗಾಪ್ರಸಾದ್ ಅವರ ಮಗ ಅನೀಶ್ (3) ಮೃತ ಬಾಲಕ. ನಿನ್ನೆ ಅವಲಕ್ಕಿ ತಿನ್ನುವಾಗ ಗಂಟಲಲ್ಲಿ ಸಿಲುಕಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆತರಲಾಗಿತ್ತು. ಅಲ್ಲಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅದರೆ ಖಾಸಗಿ ವೈದ್ಯರು ಮಗುವಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು, ಹಾಸನದ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಲಹೆ ಮಾಡಿದ್ದರು. ವೈದ್ಯರ ಸಲಹೆಯಂತೆ ಹಾಸನಕ್ಕೆ ಪ್ರಯಾಣ ಬೆಳೆಸಿದ್ದು, ಮಾರ್ಗ ಮಧ್ಯೆಯೇ ಮಗು ಮೃತಪಟ್ಟಿದೆ. ಮಗುವನ್ನು ಕಳೆದುಕೊಂಡ ಕುಟುಂಬಸ್ಥರ ರೋಧನ ಮುಗಿಲು ಮುಟ್ಟಿದೆ.


ಸಂಬಂಧಿತ ಟ್ಯಾಗ್ಗಳು

District hospital Child ಸಲಹೆ ಖಾಸಗಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ