ರಾಮಲಿಂಗಾ ರೆಡ್ಡಿ ವಿರುದ್ಧ ಪ್ರತಿಭಟನೆ

BJP yuva morcha protest against Ramalinga reddy

13-02-2018

ಬೆಂಗಳೂರು: ಹಿಂದು ಕಾರ್ಯಕರ್ತ ಸಂತೋಷ್‌ ಹತ್ಯೆಗೆ ಸ್ಕ್ರೂ ಡ್ರೈವರ್ ಬಳಸಲಾಗಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರ ಧೋರಣೆಯನ್ನು ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿದರು. ಜೆ.ಸಿ.ನಗರದ ಪೊಲೀಸ್ ಠಾಣೆ ಎದುರು ಗೃಹ ಇಲಾಖೆಯ ವೈಫಲ್ಯದ ವಿರುದ್ಧ ಘೋಷಣೆ ಕೂಗಿ ಪ್ರತಿಭಟಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಯುವಮೋರ್ಚಾ ಕಾರ್ಯಕರ್ತರ ಮೇಲೆ ಒತ್ತಡ ಹೇರಿ ಬಂಧಿಸಲು ಮುಂದಾದರು. ಆಗ ಯಾವುದೇ ಪ್ರಚೋದನೆ ಇಲ್ಲದೇ ಬಂಧಿಸುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಲಾಠಿ ಚಾರ್ಜ್ ಮೂಲಕ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಯತ್ನಿಸಿದರು. ನಂತರ ಎಲ್ಲಾ ಕಾರ್ಯಕರ್ತರನ್ನು ಬಲವಂತವಾಗಿ ಬಂಧಿಸಿ ಬೇರೆಡೆಗೆ ಕರೆದ್ಯೊಯಲಾಯಿತು.

ಪೊಲೀಸರ ದೌರ್ಜನ್ಯಕ್ಕೆ ಯುವಮೋರ್ಚಾ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಇದೇ ಧೋರಣೆ ಮುಂದುವರೆದರೆ ಗೃಹ ಸಚಿವ ರಾಮಲಿಂಗಾರೆಡ್ಡಿ ಮನೆ ಎದುರು ಪ್ರತಿಭಟಿಸುವುದಾಗಿ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ತಮ್ಮೇಶಗೌಡ ಎಚ್ಚರಿಕೆ ನೀಡಿದರು.

 


ಸಂಬಂಧಿತ ಟ್ಯಾಗ್ಗಳು

Ramalinga Reddy BJP ದೌರ್ಜನ್ಯ ಪ್ರಚೋದನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ