ಕದಿರೇಶ್ ಹತ್ಯೆ: ಸಿಬಿಐ ತನಿಖೆಗೆ ಆಗ್ರಹ

BJP yuva morcha demand to hand over kadiresh case to cbi

13-02-2018

ಬೆಂಗಳೂರು: ಕದಿರೇಶ್ ಹತ್ಯೆ ಪ್ರಕರಣದ ಕುರಿತು ಪ್ರಾಮಾಣಿಕ ತನಿಖೆ ನಡೆಸಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ಇಂದು ಪ್ರತಿಭಟನೆ ನಡೆಸಿತು. ಕದಿರೇಶ್ ಹತ್ಯೆ ಪ್ರಕರಣ ಕುರಿತಂತೆ ನಿಷ್ಪಕ್ಷಪಾತ ತನಿಖೆ ನಡೆಯುತ್ತಿಲ್ಲ ಆದ್ದರಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಬಿಜೆಪಿ ಯುವಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಆಗ್ರಹಿಸಿದರು.

ಈ ವೇಳೆ ಮಾತನಾಡಿದ ಸಂಸದ ಪಿ.ಸಿ.ಮೋಹನ್, ಕದಿರೇಶ್ ಹತ್ಯೆ ಆರೋಪಿಗಳು ನಿನ್ನೆ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ಆದರೆ, ಹತ್ಯೆಗೆ ನಿಜವಾದ ಕಾರಣ ಏನು ಎನ್ನುವುದನ್ನು ಪೊಲೀಸ್ ಇಲಾಖೆ ಬಹಿರಂಗಪಡಿಸಿಲ್ಲ. ಹತ್ಯೆಗೆ ಸಂಬಂಧಿಸಿದಂತೆ ಸರ್ಕಾರ ದಿನಕ್ಕೊಂದು ಕಾರಣ ನೀಡುತ್ತಿದೆ. ಆದರೆ, ಹತ್ಯೆಗೆ ನಿಜವಾದ ಕಾರಣವನ್ನು ಸರ್ಕಾರ ಬಹಿರಂಗಪಡಿಸಬೇಕೆಂದು ಅವರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕದಿರೇಶ್ ಪತ್ನಿ ರೇಖಾ, ಬಿಜೆಪಿ ಯುವಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಸೇರಿದಂತೆ, ಬಿಜೆಪಿ ಮುಖಂಡರು ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

 


ಸಂಬಂಧಿತ ಟ್ಯಾಗ್ಗಳು

P.C.Mohan Protest ಬಹಿರಂಗ ಕಾರ್ಯದರ್ಶಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ