ಕಿಲ್ಲರ್ ಬಿಎಂಟಿಸಿ..!

bmtc killed a lab technician

13-02-2018

ಬೆಂಗಳೂರು: ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿ ಹೋಗುತ್ತಿದ್ದ ಲ್ಯಾಬ್ ಟೆಕ್ನಿಷಿಯನ್ ಮೃತಪಟ್ಟರೆ, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮೈಸೂರು ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ವಿಜಯನಗರದ ಪೈಪ್ ಲೈನ್‍ನ ಮೊಹ್ಮದ್ ಫಾರೂಕ್ (31) ಮೃತಪಟ್ಟವರು. ಗಾಯಗೊಂಡಿರುವ ಅವರ ಪತ್ನಿ ಬುಸ್ರುಮಾ (28)  ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ.

ವಾಣಿ ವಿಲಾಸ ಆಸ್ಪತ್ರೆಯ ಬಳಿಯ ಖಾಸಗಿ ಡಯೊಗ್ನೊಸ್ಟಿಕ್ ಕೇಂದ್ರದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿದ್ದ ಮೊಹ್ಮದ್ ಫಾರೂಕ್ ಅದೇ ಕೇಂದ್ರದಲ್ಲಿ ಸ್ವಾಗತಕಾರಿಣಿಯಾಗಿದ್ದ ಪತ್ನಿ ಬುಸ್ರುಮಾ ಅವರನ್ನು ಬೆಳಿಗ್ಗೆ 8.30ರ ವೇಳೆ ಕೆಲಸಕ್ಕೆ ಕರೆದುಕೊಂದು ಹೋಂಡಾ ಶೈನ್ ಬೈಕ್ನಲ್ಲಿ ಹೋಗುತ್ತಿದ್ದರು. ಮಾರ್ಗಮಧ್ಯೆ ಮೈಸೂರು ರಸ್ತೆಯ ಅಗ್ನಿಶಾಮಕ ದಳದ ಕಚೇರಿ ಬಳಿ ಹಿಂದಿನಿಂದ ಬಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ದಾವಣಗೆರೆ ಮೂಲದ ಫಾರೂಕ್ ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಪ್ರಕರಣ ದಾಖಲಿಸಿರುವ ಚಿಕ್ಕಪೇಟೆ ಸಂಚಾರ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

BMTC Killer ಪ್ರಕರಣ ಗಂಭೀರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ