ಕೆರೆಯಲ್ಲಿ ವಿದ್ಯಾರ್ಥಿಗಳಿಬ್ಬರ ದುರ್ಮರಣ

two students died in the lake

13-02-2018 239

ತುಮಕೂರು: ಈಜು ಬಾರದ ವಿದ್ಯಾರ್ಥಿಗಳಿಬ್ಬರು ಕರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಎಲೆರಾಂಪುರ ಗ್ರಾಮದ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮೃತರು ಬೆಂಗಳೂರಿನ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಒಟ್ಟು ಹನ್ನೆರಡು ಮಂದಿ ವಿದ್ಯಾರ್ಥಿಗಳು ದೇವರಾಯನದುರ್ಗಕ್ಕೆಂದು ಬಂದಿದ್ದು ಈ ದುರ್ಘಟನೆ ಸಂಭವಿಸಿದೆ. ಕೋಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಸಂಬಂಧಿತ ಟ್ಯಾಗ್ಗಳು

students died ಈಜು ದುರ್ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ