ಕಣ್ಣೀರಿಟ್ಟ ಕುಮಾರಣ್ಣ...

H.D.Kumaraswamy tears on stage..!

14-02-2018

ಬೆಂಗಳೂರು: ನಗರದ ಟೌನ್ ಹಾಲ್ ನಲ್ಲಿ ಮಾಜಿ ಸಿಎಂ ಕುಮಾರ ಸ್ವಾಮಿ, ಆಟೋ, ಕಾರು ಮತ್ತು ಲಾರಿ ಚಾಲಕರೊಂದಿಗೆ ಸಂವಾದ ನಡೆಸಿದರು. ಚಾಲಕರ ಸಮಸ್ಯೆಗಳನ್ನು ಆಲಿಸಿ, ಓಲಾ, ಉಬರ್ ಕಂಪನಿಗಳಂತೆ ಆಟೊ ಮತ್ತು ಟ್ಯಾಕ್ಸಿ ಡ್ರೈವರ್ಗಳಿಗೂ ಸಂಸ್ಥೆ ನಿರ್ಮಿಸಿ ಕೊಡಲು ಹೊಸ ಯೋಜನೆ ಇದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಅದನ್ನು ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ, ಸಂವಾದ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಕಣ್ಣೀರಿಟ್ಟ ಘಟನೆಯೂ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಕಾರು ಚಾಲಕ ಸಂಪಂಗಿ, ತಮ್ಮ ಮಗಳು ಪ್ರಾಣಾಂತಿಕ ಕಾಯಿಲೆಯಿಂದ ಬಳಲುತ್ತಿದ್ದಾಗ 30 ಲಕ್ಷ ರೂಪಾಯಿ ಹಣ ಸಹಾಯ ಮಾಡಿ ಬೋನ್ ಮ್ಯಾರೊ ಟ್ರಾನ್ಸ್ ಪ್ಲಾಂಟೇಷನ್ ಮಾಡಿಸಿ ತಮ್ಮ ಮಗಳನ್ನು ಬದುಕಿಸಿಕೊಟ್ಟಿದ್ದಕ್ಕೆ ಕುಮಾರಸ್ವಾಮಿ ಅವರಿಗೆ ಕೃತಜ್ಞತೆ ತಿಳಿಸಿದರು. ಈ ವೇಳೆ ಭಾವುಕರಾದ ಕುಮಾರಸ್ವಾಮಿ ವೇದಿಕೆಯಲ್ಲೇ ಕಣ್ಣೀರಿಟ್ಟರು.


ಸಂಬಂಧಿತ ಟ್ಯಾಗ್ಗಳು

H.D.Kumaraswamy Government ಕೃತಜ್ಞತೆ ಟ್ಯಾಕ್ಸಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ