ಎಲ್ಲಾನು ಮಾಡೋದು ಅಧಿಕಾರಕ್ಕಾಗಿ…

BJP campain programmes in karnataka..

14-02-2018

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಶತಾಯಗತಾಯ ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು ರಾಜ್ಯದಲ್ಲಿ ಮತದಾರರ ಒಲೈಕೆಗೆ ಕಸರತ್ತು ನಡೆಸಿದ್ದಾರೆ. ಪ್ರಧಾನಿ ಸೇರಿದಂತೆ ಹಲವರು ಬಿಜೆಪಿ ನಾಯಕರು ರಾಜ್ಯದತ್ತ ಮುಖಮಾಡಿದ್ದಾರೆ. 

ಇದೇ ತಿಂಗಳ 19ರಂದು ಪ್ರಧಾನಿ ನರೇಂದ್ರ ಮೋದಿಯವರು ಶ್ರವಣಬೆಳಗೊಳ ಮತ್ತು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲಿ ರೈಲ್ವೆ ಯೋಜನೆಗಳ ಉದ್ಘಾಟನೆ ಹಾಗೂ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. 

ಇನ್ನು ಫೆಬ್ರವರಿ 20 ಮತ್ತು 21ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ದಕ್ಷಿಣ ಕನ್ನಡ, ಉತ್ತರ ಕನ್ನಡ  ಮತ್ತು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ, ಬಂಟ್ವಾಳ, ಸುರತ್ಕಲ್, ಕಾಟಿಪಳ್ಳ ಹಾಗೂ ಉಡುಪಿಯಲ್ಲಿ ಮೀನುಗಾರರ ಸಮಾವೇಶದಲ್ಲಿ ಅಮಿತ್ ಷಾ ಭಾಗಿಯಾಗಲಿದ್ದಾರೆ.
ಫೆ. 22ರಂದು ಹಾವೇರಿಯಲ್ಲಿ ಪರಿಶಿಷ್ಟ ಜಾತಿಗಳವರ ಸಮಾವೇಶ, ಫೆ. 24ರಂದು ರಾಯಚೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶ, ಫೆ.25ರಂದು ಕಲ್ಬುರ್ಗಿಯಲ್ಲಿ ಪರಿಶಿಷ್ಟ ವರ್ಗದವರ ಸಮಾವೇಶ. ಫೆ.27ರಂದು ದಾವಣಗೆರೆಯಲ್ಲಿ ಯಡಿಯೂರಪ್ಪ ಜನ್ಮದಿನವನ್ನು ರೈತ ದಿನವಾಗಿ ಆಚರಿಸಲಾಗುತ್ತದೆ.


ಸಂಬಂಧಿತ ಟ್ಯಾಗ್ಗಳು

Shobha Karandlaje Narendra Modi ಜನ್ಮದಿನ ರೈತ ದಿನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ