ಮಹಿಳೆ ಅನುಮಾನಾಸ್ಪದ ಸಾವು

woman suspicious death in belagavi

15-02-2018

ಬೆಳಗಾವಿ: ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಹುಕ್ಕೇರಿ ಪಟ್ಟಣದ ಗಣೇಶ ನಗರದಲ್ಲಿ ಬೆಳಕಿಗೆ ಬಂದಿದೆ. ವಿಜಯಲಕ್ಷ್ಮಿ ತುಕಾರಾಮ ಕಾಂಬಳೆ  (50) ಮೃತ ಮಹಿಳೆ. ನಿವೃತ್ತ ಗ್ರಾಮ ಲೆಕ್ಕಾಧಿಕಾರಿ ತುಕಾರಾಮ ಕಾಂಬಳೆ ಅವರ ದ್ವಿತೀಯ ಪತ್ನಿ ವಿಜಯಲಕ್ಷ್ಮಿ ಕಾಂಬಳೆ. ಮೊದಲ ಹೆಂಡತಿಯ ಸಾವಿನ ಬಳಿಕ ಎರಡನೇ ಮದುವೆಯಾಗಿದ್ದರು ತುಕಾರಾಮ ಕಾಂಬಳೆ. ಮನೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದ್ದರೂ, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಹುಕ್ಕೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

supecious death Murder ಹೆಂಡತಿ ಲೆಕ್ಕಾಧಿಕಾರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ