‘ಗ್ರಾಪಂ ಅಧ್ಯಕ್ಷರ ಸಾವು ಕಾಲರಾದಿಂದಲ್ಲ’15-02-2018

ಶಿವಮೊಗ್ಗ: ಭದ್ರಾವತಿ ತಾಲ್ಲೂಕಿನ ಮೈದೊಳಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜಪ್ಪ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ನಿಧನ ಹೊಂದಿರುವುದು ಕಾಲರಾದಿಂದಲ್ಲ ಎಂದು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಮಂಜಪ್ಪ(50) ಹೊಟ್ಟೆ ಉಬ್ಬರ ತೊಂದರೆಯಿಂದ ಅರೆ ಪ್ರಜ್ಞಾವ್ಯವಸ್ಥೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಕಿಡ್ನಿ ಕಾಯಿಲೆಯಿಂದ ಮಂಗಳೂರಿನ ವೆನ್‍ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವುದು ತಿಳಿದುಬಂದಿದೆ. ದೀರ್ಘ ಕಾಲದ ಲಿವರ್ ತೊಂದರೆ ಹಾಗು ಮುಂತಾದ ಕಾಯಿಲೆಗಳಿಂದ ಬಳಲುತ್ತಿರುವುದು ಕಂಡು ಬಂದಿದೆ. ಇಂದು ಮುಂಜಾನೆ ಕರಳು ರೋಗ ಮತ್ತು ಮೆದಳುನಿಷ್ಕ್ರಿಯತೆಯಿಂದ ಚಿಕಿತ್ಸೆಗೆ ಸ್ಪಂದಿಸದೆ ಮರಣ ಹೊಂದಿದ್ದಾರೆ. ಅವರಲ್ಲಿ ವಾಂತಿ ಭೇದಿ ಅಥವಾ ಕಾಲರಾ ರೋಗದ ಯಾವುದೇ ಲಕ್ಷಣಗಳು ಕಂಡು ಬಂದಿರುವುದಿಲ್ಲ ಎಂದು ಅವರಿಗೆ ಚಿಕಿತ್ಸೆ ನೀಡಿದ ವೈದ್ಯರು ತಿಳಿಸಿದ್ದಾರೆಂದು ತಿಳಿಸಿದರು.

 


ಸಂಬಂಧಿತ ಟ್ಯಾಗ್ಗಳು

panchayath cholera ಲಿವರ್ ವೈದ್ಯರು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ