ನಗರದಲ್ಲಿ ಮತ್ತೊಂದು ಅಗ್ನಿ ಅವಘಡ

 fire at bar and restaurant Huge loss

15-02-2018

ಬೆಂಗಳೂರು: ಕೆ.ಆರ್.ಮಾರುಕಟ್ಟೆಯ ಕೈಲಾಶ್ ಬಾರ್ ನಲ್ಲಿ ಅಗ್ನಿ ದುರಂತ ಹಸಿರಾಗಿರುವಾಗಲೇ ಮತ್ತೊಂದು ಬಾರ್‍ನಲ್ಲಿ ಬೆಂಕಿ ಅನಾಹುತ ಸಂಭವಿಸಿದೆ. ನಗರದ ಮೈಸೂರು ರಸ್ತೆಯಲ್ಲಿರುವ ಗಜಾನನ ಬಾರ್ ಅಂಡ್ ರೆಸ್ಟೊರೆಂಟ್ ನಲ್ಲಿ ಬೆಂಕಿ ಅವಘಡ ಸಂಭವಿಸಿ ಅಪಾರ ನಷ್ಟ ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಬಾರ್‍ ನ ಕೆಳ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮುಂಜಾನೆ 3.30ಕ್ಕೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಂಡ ಕೂಡಲೇ ಸ್ಥಳೀಯರೊಬ್ಬರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಗೆ ವಿಚಾರ ತಿಳಿಸಿದ್ದಾರೆ. ಕೂಡಲೆ ಎರಡು ಅಗ್ನಿಶಾಮಕ ವಾಹನಗಳ ಜೊತೆ ಘಟನೆ ನಡೆದ ಸ್ಥಳಕ್ಕೆ ದೌಡಾಯಿಸಿ,  ಮೊದಲಿಗೆ ಕೆಲಸ ಮುಗಿಸಿ ಮೇಲ್ಮಹಡಿಯಲ್ಲಿ ಮಲಗಿದ್ದ  ಬಾರ್ ಸಿಬ್ಬಂದಿಗಳನ್ನ ಎಬ್ಬಿಸಿ ಸುರಕ್ಷಿತವಾಗಿ ಹೊರಗೆ ಕರೆತಂದಿದ್ದಾರೆ. ನಂತರ ಬೆಳಿಗ್ಗೆ 6ರವರೆಗೆ ಶ್ರಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿ ಬಿದ್ದಿರುವುದನ್ನು ಸ್ಥಳೀಯರು ಗಮನಿಸದಿದ್ದರೆ ಸಾಕಷ್ಟು ಅನಾಹುತ ಪ್ರಾಣಹಾನಿಯಾಗುವ ಸಾಧ್ಯತೆ ಇತ್ತು ಎಂದು ತಿಳಿದುಬಂದಿದೆ. ಘಟನೆಯಿಂದ ಗಜಾನನ ಬಾರ್‍ನ ಕೆಳ ಮಹಡಿ ಸಂಪೂರ್ಣ ಭಸ್ಮವಾಗಿದೆ. ಚಾಮರಾಜಪೇಟೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

fire at Bar Restaurant ಅನಾಹುತ ಅಗ್ನಿಶಾಮಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ