ಕಡಲೆಕಾಳಿಗೆ ಬೆಂಬಲ…!

Support to Peanut...!

15-02-2018

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಕಡಲೆಕಾಳು ಇಳುವರಿ ಉತ್ತಮವಾಗಿದ್ದು, ಬೆಂಬಲ ಬೆಲೆ ಯೋಜನೆಯಡಿ ಕಡಲೆಕಾಳು ಮಾರಾಟಕ್ಕೆ ರೈತರು ನೊಂದಣಿ ಮಾಡಿಕೊಳ್ಳಲು ಫೆಬ್ರವರಿ ತಿಂಗಳ 23 ಕಡೆಯ ದಿನ ಎಂದು ಕರ್ನಾಟಕ ರಾಜ್ಯ ಮಾರಾಟ ಮಹಾ ಮಂಡಳದ ನಿರ್ದೇಶಕ ಪತಂಗೆ ಜಯವಂತ ರಾವ್ ಮನವಿ ಮಾಡಿದ್ದಾರೆ.

ರೈತರ ಹಿತದೃಷ್ಟಿಯಿಂದ ಮಾರುಕಟ್ಟೆ ಮಧ್ಯ ಪ್ರವೇಶಿಸಿ ಕಡಲೆಕಾಳು ಖರೀದಿಸುವ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ. ಪ್ರತಿ ರೈತನಿಂದ ಗರಿಷ್ಠ 10 ಕ್ವಿಂಟಾಲ್ ಗುಣಮಟ್ಟದ ಕಡಲೆಕಾಳು ಉತ್ಪನ್ನವನ್ನು, ಪ್ರತಿ ಕ್ವಿಂಟಾಲಿಗೆ 4,400 ರೂಪಾಯಿಗಳಂತೆ ಮುಂದಿನ 45 ದಿನಗಳ ಅವಧಿಗೆ ಖರೀದಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲಾ ಖರೀದಿ ಕೇಂದ್ರಗಳಲ್ಲಿ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ, ಹೀಗಾಗಿ ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಜಯವಂತ ರಾವ್ ಕೋರಿದ್ದಾರೆ. 
ಈ ಬಾರಿ ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರಗಿ, ಬೀದರ್, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳ ರೈತರಿಂದ ಕಡಲೆಕಾಳು ಖರೀದಿಸಲು ಆದೇಶ ಹೊರಡಿಸಲಾಗಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳವನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಿ ಆವರ್ತ ನಿಧಿಯಿಂದ 10 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಜಯವಂತ ರಾವ್ ಮಾಹಿತಿ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

ground nut ಬೆಂಬಲ ಬೆಲೆ ಇಳುವರಿ ನಿರ್ದೇಶಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ