ಪತ್ರಕರ್ತರಿಗೆ ‘ಮಾಧ್ಯಮ ಸಂಜೀವಿನಿ’

New scheme for karnataka journalists: madhyama sanjeevini

16-02-2018

ಬೆಂಗಳೂರು: ವೃತ್ತಿ ನಿರ್ವಹಣೆ ವೇಳೆ ಅಪಘಾತ ಅಥವ ಅವಘಡಗಳಿಗೆ ಒಳಗಾಗಿ ನಿಧನರಾಗುವ ಪತ್ರಕರ್ತರ ಕುಟುಂಬಗಳಿಗೆ 5 ಲಕ್ಷ ವರೆಗಿನ ಜೀವ ವಿಮೆ ಖಾತರಿ ನೀಡುವ ‘ಮಾಧ್ಯಮ ಸಂಜೀವಿನಿ’ ಎಂಬ ಹೊಸ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ತಮ್ಮ ಬಜೆಟ್ ಭಾಷಣದಲ್ಲಿ ರಾಜೀವ್ ಆರೋಗ್ಯ ಯೋಜನೆಯನ್ನು ಮತ್ತಷ್ಟು ಬಲವರ್ಧನೆಗೊಳಿಸುವ ಮೂಲಕ ಪತ್ರಕರ್ತರ ಆರೋಗ್ಯ ಸೌಲಭ್ಯವನ್ನು ವಿಸ್ತರಿಸಲಾಗುವುದು. ಪತ್ರಿಕೆಗಳನ್ನು ಮನೆ ಮನೆಗಳಿಗೆ ಹಂಚಿ ಅನಿಶ್ಚಿತ ಬದುಕು ಸಾಗಿಸುವ ಸಿಬ್ಬಂದಿಗಳ ಕ್ಷೇಮಾಭಿವೃದ್ಧಿಗೆ 2 ಕೋಟಿ ರೂ.ಗಳ ಕ್ಷೇಮ ನಿಧಿ ಸ್ಥಾಪಿಸಲಾಗುವುದು. ಬೆಂಗಳೂರಿನಲ್ಲಿ 5ಕೋಟಿ ರೂ.ಗಳ ವೆಚ್ಚದಲ್ಲಿ ಪತ್ರಕರ್ತರ ಭವನ ನಿರ್ಮಿಸಲಾಗುವುದು ಎಂದು ತಿಳಿಸಿದ್ದಾರೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗೆ 239 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದ್ದು, ಕರ್ನಾಟಕ ಚಲನಚಿತ್ರ ಅಕಾಡೆಮಿಯ ಜೇನುಗೂಡು ಕಥಾ ಕಣಜದಿಂದ ಕಥೆಗಳನ್ನು ಆಯ್ದುಕೊಂಡು ಚಿತ್ರ ನಿರ್ಮಿಸುವ ನಿರ್ಮಾಪಕರಿಗೆ 20 ಲಕ್ಷ ಸಹಾಯಧನ ಮತ್ತು ಕಥಾ ಲೇಖಕರಿಗೆ 5 ಲಕ್ಷ ವಿಶೇಷ ಸಹಾಯಧನವನ್ನು ಪ್ರತಿ ವರ್ಷ 8 ಚಿತ್ರಗಳಿಗೆ ನೀಡಲಾಗುವುದು ಎಂದು ಹೇಳಿದರು. ಕಳೆದ 5 ವರ್ಷದಲ್ಲಿ ಪತ್ರಕರ್ತರ ಮಾಸಾಶನವನ್ನು 3ರಿಂದ 10 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ಮೃತ ಪತ್ರಕರ್ತರ ಕುಟುಂಬದ ಮಾಸಶನವನ್ನು 1ರಿಂದ 3 ಸಾವಿರ ರೂ.ಗೆ ಹೆಚ್ಚಿಸಲಾಗಿದೆ. ರಾಜೀವ್ ಆರೋಗ್ಯ ವಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಜಿಲ್ಲಾ ಮಟ್ಟದ ಪತ್ರಕರ್ತರಿಗೆ ಉಚಿತ ಬಸ್‍ಪಾಸ್ ಒದಗಿಸಲಾಗಿದೆ ಎಂದವರು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Journalist budget ಪತ್ರಕರ್ತ ವಿಮಾ ಯೋಜನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ