ಸುಪ್ರೀಂ ತೀರ್ಪು: ರೈತರ ಮೊಗದಲ್ಲಿ ಸಂತಸ

supreme court verdict: Karnataka farmers happy

16-02-2018

ಮೈಸೂರು: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂ ಕೋರ್ಟ್ನ ಐತಿಹಾಸಿಕ ತೀರ್ಪಿನಿಂದ ರಾಜ್ಯದಲ್ಲೆಡೆ ಸಂಭ್ರಮ ಸಡಗರ ಮನೆಮಾಡಿದೆ. ಕರ್ನಾಟಕದ ಪಾಲಿನ 14.05 ಟಿಎಂಸಿ ನೀರು ಹೆಚ್ಚಿಸಿರುವುದು ಕಾವೇರಿ ಕಣಿವೆ ಪ್ರದೇಶದ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ. ಮೈಸೂರಿನ ತ್ಯಾಗರಾಜ ರಸ್ತೆಯಲ್ಲಿರುವ ಪ್ರಸನ್ನ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಮೈಸೂರು ಕನ್ನಡ ವೇದಿಕೆ ಮತ್ತು ಅಕ್ಕನ ಬಳಗ ಶಾಲಾ ವಿದ್ಯಾರ್ಥಿಗಳು ಸಂಭ್ರಮಿಸಿದರು. ಸಿಹಿ ಹಂಚಿ ಕನ್ನಡ ಪರ ಜೈಕಾರ ಕೂಗಿದರು.  ಮಂಡ್ಯದಲ್ಲೂ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ, ಮಂಡ್ಯದ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು. ಮಂಡ್ಯದ ಸಂಜಯ್ ವೃತ್ತದಲ್ಲಿ ಸಿಹಿ ಹಂಚಿ ಕಾವೇರಿಗೆ ಮತ್ತು ಸುಪ್ರೀಂ ಕೋರ್ಟ್ ಗೆ ಜೈಕಾರ ಹಾಕಿದರು.

 

 

 


ಸಂಬಂಧಿತ ಟ್ಯಾಗ್ಗಳು

supreme court cauvery ಜೈಕಾರ ಸಂಭ್ರಮ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ