ರಾಜ್ಯಕ್ಕೆ 'ನಾವೀನ್ಯತಾ ಪ್ರಾಧಿಕಾರ'16-02-2018

ಬೆಂಗಳೂರು: ರಾಜ್ಯದ ವಿವಿಧ ವಲಯಗಳಲ್ಲಿ ನಾವೀನ್ಯತೆಯನ್ನು ಪ್ರೋತ್ಸಾಹಿಸಲು ತಮ್ಮ ಅಧ್ಯಕ್ಷತೆಯಲ್ಲಿ ‘ಕರ್ನಾಟಕ ನಾವೀನ್ಯತಾ ಪ್ರಾಧಿಕಾರ’ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್‍ನಲ್ಲಿ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ ಸಂಶೋಧನೆ, ಅಭಿವೃದ್ಧಿ ಸಂಸ್ಥೆಗಳು, ನವೋದ್ಯಮಗಳನ್ನು ಗಮನದಲ್ಲಿಟ್ಟುಕೊಂಡು ಉತ್ಪನ್ನ ಅಭಿವೃದ್ಧಿಗೆ ಪ್ರೋತ್ಸಾಹ ನೀಡುವ ಸಲುವಾಗಿ ಐಪಿ ಸಂರಕ್ಷಣೆ ಮತ್ತು ಉತ್ತೇಜನಕ್ಕಾಗಿ ಹೊಸ ಯೋಜನೆ ಪ್ರಾರಂಭಿಸಲಾಗುವುದು. ಪೇಟೆಂಟ್‍ಗಳ ವಿವರಗಳನ್ನು ಸಂಗ್ರಹಿಸಿ ವಿನಿಮಯಕ್ಕೆ ಅನುಕೂಲವಾಗುವಂತೆ ಪೇಟೆಂಟ್‍ಗಳ ಭಂಡಾರ ಸ್ಥಾಪಿಸಲಾಗುವುದು. ಇದು ನಾವೀನ್ಯತೆ ಉತ್ತೇಜಿಸಲು ನೆರವಾಗಲಿದೆ ಎಂದಿದ್ದಾರೆ.

ಉದ್ದಿಮೆಗಳ ವಿನ್ಯಾಸ ಮತ್ತು ಉತ್ಪನ್ನಗಳ ವಿನ್ಯಾಸವನ್ನು ಉತ್ತೇಜಿಸುವ ಉದ್ದೇಶದಿಂದ ಸೆಂಟರ್ ಫಾರ್ ಎಕ್ಸಲೆನ್ಸ್ ಇನ್ ಡಿಸೈನ್ ವಿಭಾಗ ಸ್ಥಾಪಿಸಲಾಗುವುದು. ನವೋದ್ಯಮಗಳಿಗೆ ಉತ್ತೇಜನ ನೀಡಲು ಕಲಬುರಗಿಯಲ್ಲಿ ದೇಶ್‍ಪಾಂಡೆ ಫೌಂಡೇಷನ್ ಸಹಯೋಗದಲ್ಲಿ 5 ಕೋಟಿ ರೂ.ವೆಚ್ಚದಲ್ಲಿ ಇನ್‍ಕ್ಯೂಬೆಷನ್ ಸೆಂಟರ್ ಸ್ಥಾಪನೆ. ಹಾರ್ಡ್‍ವೇರ್ ಉಪಕರಣಗಳು ಮತ್ತು ಸೆಮಿಕಂಡಕ್ಟರ್ ಚಿಪ್‍ಗಳ ವಿನ್ಯಾಸ ಮತ್ತು ಅಭಿವೃದ್ಧಿಗೆ ಉತ್ತೇಜನ ನೀಡಲು ಪ್ರಯೋಗಾಲಯ ಸ್ಥಾಪನೆ, ಕೃಷಿ ಕ್ಷೇತ್ರದಲ್ಲಿ ನೂತನ ಅವಿಷ್ಕಾರಕ್ಕಾಗಿ ಅಗ್ರಿ ಇನ್ನೋವೇಷನ್ ಕೇಂದ್ರ ಸ್ಥಾಪಿಸುವುದಾಗಿ ಮುಖ್ಯಮಂತ್ರಿ ಅವರು ವಾಗ್ದಾನ ನೀಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ