ರಸ್ತೆ ಸುರಕ್ಷತಾ ಕಾರ್ಯಕ್ರಮಗಳಿಗೆ 150 ಕೋಟಿ

150 crore for road safety works

16-02-2018

ಬೆಂಗಳೂರು: ರಾಜ್ಯದಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ಉದ್ದೇಶದಿಂದ ವಿವಿಧ ಯೋಜನೆಗಳಡಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಕೈಗೊಳ್ಳಲು 150 ಕೋಟಿ ರೂ ನಿಗದಿ ಮಾಡಿದ್ದು, ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ 4ನೇ ಹಂತದಲ್ಲಿ 2,722 ಕೀ.ಮೀ. ಉದ್ದದ ರಾಜ್ಯ ಹೆದ್ದಾರಿ ಅಭಿವೃದ್ಧಿಪಡಿಸುವುದಾಗಿ ಪ್ರಕಟಿಸಲಾಗಿದೆ.

ರಾಜ್ಯ ಹೆದ್ದಾರಿ ಅಭಿವೃದ್ಧಿಗಾಗಿ 3,480 ಕೋಟಿ ರೂ ನಿಗದಿಮಾಡಿದ್ದು, ಬರುವ ವರ್ಷ ಸಮಗ್ರ ಯೋಜನಾ ವರದಿ ಸಿದ್ಧವಾಗಲಿದೆ, ಬೆಂಗಳೂರಿನ ಬಹುಮಹಡಿ ಕಟ್ಟಡದಲ್ಲಿ 20 ಕೋಟಿ ರೂ ವೆಚ್ಚದಲ್ಲಿ ಬಹು ಹಂತದ ಕಾರು ಪಾರ್ಕಿಂಗ್ ಕಟ್ಟಡ ನಿರ್ಮಾಣ, ಮಡಿಕೇರಿ ತಲಕಾವೇರಿ ರಸ್ತೆಯ ಆಯ್ದ ಭಾಗಗಳಲ್ಲಿ 10 ಕೋಟಿ ರೂ ವೆಚ್ಚದಲ್ಲಿ ಮರು ಡಾಂಬರೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುವುದು. ಕಾರವಾರ ಬಂದರಿನಲ್ಲಿ 61 ಕೋಟಿ ರೂ ವೆಚ್ಚದಲ್ಲಿ 250 ಮೀಟರ್ ಉದ್ದದ ಕೋಸ್ಟಲ್ ಬರ್ತ್, 90 ಕೋಟಿ ರೂ ವೆಚ್ಚದಲ್ಲಿ 425 ಮೀಟರ್ ಉದ್ದದ ಅಲೆ ತಡೆಗೋಡೆ ನಿರ್ಮಾಣ ಮಾಡುವುದಾಗಿ ಬಜೆಟ್ ನಲ್ಲಿ ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ