ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ಬಸವ ಜಯಂತಿ ಆಚರಣೆ

Kannada News

29-04-2017 331

ಹುಬ್ಬಳ್ಳಿ:-ಮಹಾಮಾನವತಾವಾದಿ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಹುಬ್ಬಳ್ಳಿಯಲ್ಲೂ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ನಗರದ ತುಂಬೆಲ್ಲಾ ಎಲ್ಲಾ ಪಕ್ಷಗಳು ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರಿಂದ ಬಸವಣ್ಣನವರ ಜಯಂತಿಯನ್ನು ಆಚರಣೆ ಮಾಡಲಾಯಿತು. ಇನ್ನೂ ನಗರದ ಹಳೇ ಬಸ್ ನಿಲ್ದಾಣದ ಬಳಿ ಇರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆಯನ್ನು ಮಾಡಲಾಯಿತು. ಬಿಜೆಪಿ ಪಕ್ಷದ ವತಿಯಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಸದ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವರು ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇನ್ನೂ ಇವರೊಂದಿಗೆ ವಿವಿಧ ಸಂಘಟನೆಗಳು ಬಸವ ಸಮಿತಿಯವರು ಸಾರ್ವಜನಿಕರು ಸೇರಿದಂತೆ ಹಲವರು ಮಾಲಾರ್ಪಣೆ ಮಾಡಿ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನವನ್ನು ಸಲ್ಲಿಸಿದರು. ಇತ್ತ ಜೆಡಿಎಸ್ ಪಕ್ಷದಿಂದಲೂ ಕೂಡಾ ಜಯಂತಿಯನ್ನು ಆಚರಣೆ ಮಾಡಲಾಯಿತು. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸೇರಿದಂತೆ ಹಲವರು ಕೂಡಾ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಇದೇ ವೇಳೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಸದ ಪ್ರಹ್ಲಾದ್ ಜೋಶಿ ,ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾತನಾಡಿ ಬಸವಣ್ಣನವರ ಸಾಧನೆಯನ್ನು ನಾವೆಲ್ಲರೂ ಬದುಕಿನಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

Links :ಟಾಪ್ ಪ್ರತಿಕ್ರಿಯೆಗಳು


Really it is good development but it is too late to implement this awareness. Any how, atleast these days we awaked. But from today we are all should follows of Lord Basavanna`s Vachans.
  • Sathisha
  • CISF