ಪ್ರಧಾನಿ ಮೈಸೂರು ಭೇಟಿ ಕಾರ್ಯಕ್ರಮ

Narendra modi visits to Mysuru

17-02-2018

ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ ರಾಜ್ಯಕ್ಕೆ ಬರುತ್ತಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಭಾನುವಾರ ರಾತ್ರಿ 11ಕ್ಕೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಧಾನಿ ಮೋದಿ ಅವರನ್ನು ಎದುರುಗೊಳ್ಳುವುದಕ್ಕಾಗಿಯೇ ಸಿಎಂ ಸಿದ್ದರಾಮಯ್ಯ ಮೈಸೂರಿಗೆ ಆಗಮಿಸಲಿದ್ದಾರೆ. ಫೆ.19ರಂದು ಮೋದಿ ಅವರು ಮೈಸೂರು ರೈಲ್ವೆ ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದು ಬಳಿಕ  ಹೆದ್ದಾರಿ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಆದರೆ ತವರಲ್ಲೇ ನಡೆಯುವ ಸರ್ಕಾರಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯಗೆ ಆಹ್ವಾನ ನೀಡಲಾಗಿಲ್ಲ. ಈ ಮೂಲಕ ಕೇಂದ್ರ ಸರ್ಕಾರ ಶಿಷ್ಟಾಚಾರ ಉಲ್ಲಂಘಿಸಿದೆ ಎಂಬ ಮಾತುಗಳು ಕೇಳಿಬರುತ್ತಿವೆ.


ಸಂಬಂಧಿತ ಟ್ಯಾಗ್ಗಳು

Narendra modi siddaramaiah ಶಿಷ್ಟಾಚಾರ ಉಲ್ಲಂಘನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ