'ಪ್ರಾಥಮಿಕ' ಪ್ರತಿಭಟನೆ

students protest against teachers

17-02-2018

ವಿಜಯಪುರ: ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕಿದ್ದ ಶಿಕ್ಷಕರ ವೃಂದದ ವರ್ತನೆಗೆ ಬೇಸತ್ತ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಶಾಲೆ ಮುಂದೆ ಪ್ರತಿಭಟಿಸಿದ್ದಾರೆ. ಬಸವನ ಬಾಗೇವಾಡಿ ತಾಲ್ಲೂಕಿನ ಚಿಕ್ಕಾಸಂಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು, ತಮ್ಮ ಶಿಕ್ಷಕರ ವಿರುದ್ಧ ಪ್ರತಿಭಟನೆಗಿಳಿದಿದ್ದಾರೆ. ಶಿಕ್ಷಕರು ಪದೇ ಪದೇ ಶಾಲೆಗೆ ಚಕ್ಕರ್ ಹಾಕುವುದರ ವಿರುದ್ಧ ಮತ್ತು ಶಾಲಾ ಅವಧಿಯಲ್ಲಿ ತರಗತಿ ಕೊಠಡಿಯಲ್ಲೇ ಮಲಗುವ ಮುಖ್ಯ ಶಿಕ್ಷಕಿ ವಿರುದ್ಧ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

students school ಸರ್ಕಾರಿ ಕೊಠಡಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ