ಖಾಯಂಗೊಳಿಸಲು ಆಗ್ರಹ

17-02-2018
ಚಿಕ್ಕಬಳ್ಳಾಪುರ: ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಕಂಪ್ಯೂಟರ್ ಆಪರೇಟರ್ ಗಳು ತಮ್ಮ ಸೇವೆ ಖಾಯಂಗೊಳಿಸುವಂತೆ ಫೆಬ್ರವರಿ 19ರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ. 13 ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಂಪ್ಯೂಟರ್ ಆಪರೇಟರ್ ಆಗಿರುವ ನಮ್ಮನ್ನು ಖಾಯಂಗೊಳಿಸುವ ಬಗ್ಗೆ ಎಷ್ಟು ಬಾರಿ ಒತ್ತಾಯಿಸಿದರೂ ಸ್ಪಂದಿಸದ ಸರ್ಕಾರ, ಇದೀಗ ನೇರ ನೇಮಕಾತಿಗೆ ಮುಂದಾಗಿದೆ. ಇದನ್ನು ನಿಲ್ಲಿಸಬೇಕು ಮತ್ತು ಸದ್ಯ ಸೇವೆ ಸಲ್ಲಿಸುತ್ತಿರುವ ನೌಕರರನ್ನೇ ಮುಂದುವರಿಸಬೇಕು ಎಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟ ಕಾಲ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕಂಪ್ಯೂಟರ್ ಆಪರೇಟರ್ ಸಂಘದ ಚಂದ್ರಶೇಖರ್ ತಿಳಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ