ಮಹಾ ಮಜ್ಜನಕ್ಕೆ ಸಜ್ಜು

All set for Mahamastakabhisheka

17-02-2018

ಹಾಸನ: ಶ್ರವಣಬೆಳಗೊಳದಲ್ಲಿ ಗೊಮ್ಮಟೇಶ್ವರನ 88ನೇ ಮಹಾಮಸ್ತಕಾಭಿಷೇಕಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿರುವ ಈ ಶತಮಾನದ ಎರಡನೇ ಮಹಾಮಸ್ತಕಾಭಿಷೇಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ವಿಶೇಷ ವಿಮಾನದ ಮೂಲಕ ಸಿಎಂ ಶ್ರವಣಬೆಳಗೊಳಕ್ಕೆ ಆಗಮಿಸಲಿದ್ದಾರೆ. ಮಹಾಮಸ್ತಕಾಭಿಷೇಕದ ಉಸ್ತುವಾರಿ ವಹಿಸಿರುವ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಕಾರ್ಯಕ್ರಮದ ಪ್ರಮುಖ ಕಾರ್ಯಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಹಾಮಜ್ಜನಕ್ಕೆ ಸಿಎಂ ಚಾಲನೆ ಹಿನ್ನೆಲೆ, ಭದ್ರತೆ ದೃಷ್ಟಿಯಿಂದ ಸಂಜೆ 6ರ ತನಕ ಸಾರ್ವಜನಿಕರು ಇಂದ್ರಗಿರಿ ಬೆಟ್ಟ ಏರುವುದಕ್ಕೆ ನಿಷೇಧ ಹೇರಲಾಗಿದೆ.


ಸಂಬಂಧಿತ ಟ್ಯಾಗ್ಗಳು

Mahamastakabhisheka shravanabelagola ಮಹಾಮಜ್ಜನ ಭದ್ರತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ