ಅಗಲಿದ ರೈತ ನಾಯಕನಿಗೆ ಗಣ್ಯರ ಸಂತಾಪ19-02-2018

ಮಂಡ್ಯ: ಹೃದಯಾಘಾತದಿಂದ ಸಾವನ್ನಪ್ಪಿರುವ ರೈತ ಮುಖಂಡ ಹಾಗೂ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ನಿಧನಕ್ಕೆ ಸರ್ವೋದಯ ಪಕ್ಷದ ಶಾಸಕರು ಹಾಗೂ ರೈತ ಹೋರಾಟಗಾರರು, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಪುಟ್ಟಣ್ಣಯ್ಯ ರೈತರ ಮುಖಂಡರಾಗಿ ರೈತರ ಪರ ಹಲವಾರು ಹೋರಾಟಗಳನ್ನು ಮಾಡಿದ್ದಾರೆ. ಬಡವರ, ಮಹಿಳೆಯರ, ಶೋಷಿತರ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ನಿಧನದಿಂದ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟಾಗಿದೆ. ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಚಿವರು ಪ್ರಾರ್ಥಿಸಿದ್ದಾರೆ.

ಹಿರಿಯ ರೈತ ಹೋರಾಟಗಾರ ಕೆ.ಎಸ್.ಪುಟ್ಟಣ್ಣಯ್ಯ ಅವರ ಸಾವಿನ ಸುದ್ದಿ ದಿಗ್ಭ್ರಮೆ ಉಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ರೈತ ಚಳುವಳಿ ಒಬ್ಬ ಧೀಮಂತ ನಾಯಕನನ್ನು ಕಳೆದುಕೊಂಡಿದೆ. ಬಹುಕಾಲದ ಸ್ನೇಹಿತನ ಅಗಲಿಕೆ ನನಗೆ ಅತೀವ ದು:ಖವನ್ನುಂಟು ಮಾಡಿದೆ ಎಂದರು.


ಸಂಬಂಧಿತ ಟ್ಯಾಗ್ಗಳು

k.s.puttannaiah farmers ಕುಟುಂಬ ಹೋರಾಟಗಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ