ಶಿವಾಜಿ ಸರ್ಕಲ್ ಉದ್ಘಾಟನೆಗೆ ವಿರೋಧ..!

Oppose to Shivaji Circle Inauguration in koppal

19-02-2018

ಕೊಪ್ಪಳ: ಛತ್ರಪತಿ ಶಿವಾಜಿ ಜಯಂತಿ ಹಿನ್ನೆಲೆ, ಕೊಪ್ಪಳದ ಕನಕಗಿರಿ ಪಟ್ಟಣದಲ್ಲಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆದಿದೆ. ಪಟ್ಟಣದಲ್ಲಿ ಶಿವಾಜಿ ಸರ್ಕಲ್ ಉದ್ಘಾಟನೆಗೆ ಹಿಂದೂಪರ ಸಂಘಟನೆಗಳು ಮುಂದಾಗಿದ್ದು, ಮತ್ತೊಂದು ಕೋಮಿನವರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ಕೆರಳಿದ ಹಿಂದು ಸಂಘಟನೆಗಳ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿದ ವ್ಯಕ್ತಿಗಳನ್ನು ಕೂಡಿ ಹಾಕಿ, ನಂತರದಲ್ಲಿ ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಆದರೆ ಬಂಧಿತ ವ್ಯಕ್ತಿಗಳನ್ನು ಬಿಡುಗಡೆ ಮಾಡುವಂತೆ ಠಾಣೆಗೆ ನೂರಾರು ಜನರು ನುಗ್ಗಲು ಯತ್ನಿಸಿದ್ದು, ಇದರಿಂದ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ಇದೆಲ್ಲದರ ನಡುವೆ ಕೊನೆಗೂ ಸರ್ಕಲ್ ಉದ್ಘಾಟನೆಗೆ ಪೊಲೀಸರು ಅವಕಾಶ ಮಾಡಿಕೊಟ್ಟಿದ್ದಾರೆ. ಆದರೆ ಇದನ್ನು ವಿರೋಧಿಸಿ ಇನ್ನೊಂದು ಕೋಮಿನವರು ಪ್ರತಿಭಟನೆ ಮುಂದುವರೆಸಿದರು.


ಸಂಬಂಧಿತ ಟ್ಯಾಗ್ಗಳು

chatrapati shivaji oppose ಜಯಂತಿ ಅವಕಾಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ